ಕಣ್ಣೂರು: ಪ್ರೌಢಶಾಲೆ ಮತ್ತು ಮಹಿಳಾ ಪಿಯು ಕಾಲೇಜಿನ ವಾರ್ಷಿಕೋತ್ಸವ
ಮಂಗಳೂರು: ಕಣ್ಣೂರು ಎಜುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್‌ನ ಅಧೀನದಲ್ಲಿರುವ ಕಣ್ಣೂರು ಆಂಗ್ಲ ಮಾಧ್ಯಮ ಪ್ರೌಢಶಾಲೆ ಮತ್ತು ಮಹಿಳಾ ಪಿಯು ಕಾಲೇಜಿನ ವಾರ್ಷಿಕೋತ್ಸವವು ಶುಕ್ರವಾರ ನಡೆಯಿತು.
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮನ್ಸೂರ್ ಅಲಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಬದುಕಿನಲ್ಲಿ ಶಿಸ್ತು, ಸವಾಲು, ಪರಿಶ್ರಮವಿದ್ದರೆ ಯಾವುದೇ ಗುರಿ ಸಾಧಿಸಬಹುದು. ಹಾಗಾಗಿ ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ಕಠಿಣ ಪರಿಶ್ರಮ ಪಡಬೇಕಾಗಿದೆ ಎಂದರು.
ಟ್ರಸ್ಟ್‌ನ ಉಪಾಧ್ಯಕ್ಷ ಕೆ.ಬಿ. ಅಬ್ದುಲ್ ರಹ್ಮಾನ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಉಪಾಧ್ಯಕ್ಷ ಹಾಜಿ ಇಬ್ರಾಹೀಂ ಕೋಡಿಜಾಲ್, ಭಾರತ್ ಕನ್‌ಸ್ಟ್ರಕ್ಷನ್‌ನ ಆಡಳಿತ ನಿರ್ದೇಶಕ ಎಸ್.ಎಂ. ಮುಸ್ತಫಾ ಭಾಗವಹಿಸಿದ್ದರು.
ವೇದಿಕೆಯಲ್ಲಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಎಸ್. ಉಮರಬ್ಬ, ಮುಖ್ಯ ಶಿಕ್ಷಕಿಯರಾದ ಸಂಶಾದ್, ವಿಶಾಲಾಕ್ಷಿ ಉಪಸ್ಥಿತರಿದ್ದರು.
ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಹಾಗು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಈ ಸಂದರ್ಭ ನಡೆಸಲಾಯಿತು.
ಟ್ರಸ್ಟ್‌ನ ಜೊತೆ ಕಾರ್ಯದರ್ಶಿ ಸಿತಾರ್ ಅಬ್ದುಲ್ ಮಜೀದ್ ಸ್ವಾಗತಿಸಿದರು. ಸಂಚಾಲಕ ರಿಯಾಝ್ ಅಹ್ಮದ್ ಕಣ್ಣೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಆಶಾಲತಾ ವಂದಿಸಿದರು.