×
Ad

ಮಂಗಳೂರು: ಮಾದಕ ವಸ್ತು ಮಾರಾಟ ಆರೋಪ; ಇಬ್ಬರ ಸೆರೆ

Update: 2024-01-02 23:23 IST

ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್ ಬಳಿ ಸ್ಕೂಟರ್‌ನಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಪೊಲೀಸರು ಸೋಮವಾರ ಇಬ್ಬರನ್ನು ಬಂಧಿಸಿದ ಘಟನೆ ವರದಿಯಾಗಿದೆ.

ಬಜಾಲ್‌ನ ಅಶ್ಪಾಕ್ ಯಾನೆ ಜುಟ್ಟು ಅಶ್ಪಾಕ್ (27) ಮತ್ತು ಕಾಟಿಪಳ್ಳದ ಉಮರ್‌ ಫಾರೂಕ್ ಇರ್ಫಾನ್ (26) ಬಂಧಿತ ಆರೋಪಿಗಳಾಗಿದ್ದಾರೆ. ಇವರಿಂದ ಎಂಡಿಎಂಎ ಹಾಗೂ ಕೃತ್ಯಕ್ಕೆ ಬಳಸಿದ ಸ್ಕೂಟರ್ ಹಾಗೂ ಮೊಬೈಲ್ ಫೋನ್ ಸೇರಿದಂತೆ ಒಟ್ಟು ರೂ 1,92,800 ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪಡೀಲ್ ಬಳಿ ಸ್ಕೂಟರ್‌ನಲ್ಲಿ ಮಾದಕ ವಸ್ತುವಾದ ಮಾರಾಟ ಮಾಡುತ್ತಿರುವುದಾಗಿ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.

ಆರೋಪಿ ಜುಟ್ಟು ಅಶ್ಫಾಕ್ ಮೇಲೆ ಮಂಗಳೂರು ನಗರದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ, ಕಂಕನಾಡಿ ನಗರ ಪೊಲೀಸ್ ಠಾಣೆ, ಉಳ್ಳಾಲ ಪೊಲೀಸ್ ಠಾಣೆ, ಸುರತ್ಕಲ್ ಪೊಲೀಸ್, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಗಳಲ್ಲಿ ಕೊಲೆ ಯತ್ನ ,ದರೋಡೆ ಸುಲಿಗೆ ದೋಂಬಿಯಂತಹ ಒಟ್ಟು 12 ಪ್ರಕರಣಗಳು ದಾಖಲಾಗಿರುತ್ತವೆ.

ಆರೋಪಿ ಇರ್ಫಾನ್‌ನ ಮೇಲೆ ಮಂಗಳೂರು ದಕ್ಷಿಣ, ಮಂಗಳೂರು ಗ್ರಾಮಾಂತರ, ಉಳ್ಳಾಲ ಪೊಲೀಸ್ ಠಾಣೆ, ಮೂಡಬಿದ್ರೆ ಪೊಲೀಸ್ ಠಾಣೆ, ಬರ್ಕೆ ಪೊಲೀಸ್ ಠಾಣೆ, ಕೊಣಜೆ ಪೊಲೀಸ್ ಠಾಣೆ, ಸುರತ್ಕಲ್ ಪೊಲೀಸ್ ಠಾಣೆ, ಕಾರ್ಕಳ ನಗರ ಪೊಲೀಸ್ ಠಾಣೆ, ಶಿವ ಪೊಲೀಸ್ ಠಾಣೆ, ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ, ಮಂಗಳೂರು ಉತ್ತರ ಪೊಲೀಸ್ ಠಾಣೆ, ಮಂಗಳೂರು ಪೂರ್ವ ಪೊಲೀಸ್ ಠಾಣೆಗಳಲ್ಲಿ ಆರೋಪಿ ವಿರುದ್ಧ ಕೊಲೆಯತ್ನ, ದರೋಡೆ, ಸುಲಿಗೆ, ಸರಗಳ್ಳತನ, ದೊಂಬಿ, ವಾಹನ ಕಳ್ಳತನದಂತಹ ಒಟ್ಟು 25 ಪ್ರಕರಣಗಳು ದಾಖಲಾಗಿರುತ್ತವೆ ಎಂದು ನಗರ ಆಯುಕ್ತರ ಕಚೇರಿ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News