ರಕ್ಷಿತ್ ಪಡ್ರೆಗೆ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ ಪ್ರದಾನ
ಕಾರ್ಕಳ: ಕಾರ್ಕಳ ಹಿರ್ಗಾನ ಶ್ರೀಕುಂದೇಶ್ವರ ಕ್ಷೇತ್ರ ವತಿಯಿಂದ ತೆಂಕು- ಬಡಗು ತಿಟ್ಟಿನ ಕಲಾ ಸವ್ಯಸಾಚಿ ರಕ್ಷಿತ್ ಪಡ್ರೆಗೆ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಯನ್ನು ಜಾತ್ರೆಯ ಸಾಂಸ್ಕೃತಿಕ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.
ಪ್ರಶಸ್ತಿ ಪ್ರದಾನ ಮಾಡಿದ ಕೇಮಾರು ಸಾಂದೀಪನಿ ಆಶ್ರಮದ ಈಶ ವಿಠಲದಾಸ ಸ್ವಾಮೀಜಿ ಮಾತನಾಡಿ, ಬಡವರ ಕಣ್ಣೀರು ಒರೆಸಿದರೆ, ಅಶಕ್ತರಿಗೆ ಕೊಡುವ ಸಹಾಯ ದೇವರಿಗೆ ಸೇರುತ್ತದೆ. ಹೀಗಾಗಿ ಬಡವರಲ್ಲಿ ದೇವರನ್ನು ಕಾಣಬೇಕು ಎಂದರು.
ಕಾರ್ಯಕ್ರಮ ಸಂಯೋಜಿಸಿದ ಕುಂದೇಶ್ವರ ಪ್ರತಿಷ್ಠಾನ ಅಧ್ಯಕ್ಷ ಜಿತೇಂದ್ರ ಕುಂದೇಶ್ವರ ಮಾತನಾಡಿದರು. ಕ್ಷೇತ್ರ ಆಡಳಿತ ವರ್ಗದ ಗಂಗಾ ಆರ್.ಭಟ್, ವೇ.ಮೂ. ಕೃಷ್ಣ ರಾಜೇಂದ್ರ ಭಟ್, ವೇ.ಮೂ. ರವೀಂದ್ರ ಭಟ್, ಅಜೆಕಾರ್ ಬಾಲಕೃಷ್ಣ ಶೆಟ್ಟಿ, ರಂಜಿನಿ ಲಕ್ಷ್ಮೀನಾರಾಯಣ, ರಂಗಿಣಿ ಉಪೇಂದ್ರ ರಾವ್, ಸುಮನಾ ಸುಧೀಂದ್ರ ಭಟ್ ಇದ್ದರು. ಪ್ರತಿಜ್ಞಾ ಪ್ರಾರ್ಥಿಸಿದರು.
ಕಲಾಭೂಷಣ: ಇದೇ ಸಂದರ್ಭ ಛಾಯಾಗ್ರಹಣ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಶ್ರೀಗುರು ಸ್ಟುಡಿಯೋದ ಶರತ್ ಕಾನಂಗಿ ಅವರಿಗೆ ಕುಂದೇಶ್ವರ ಕಲಾಭೂಷಣ ಗೌರವ ಅರ್ಪಿಸಲಾಯಿತು.
ಉದ್ಘಾಟನೆ: ಶಾಸಕ ವಿ. ಸುನಿಲ್ ಕುಮಾರ್ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭ ಹಿರ್ಗಾನ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಹಾವೀರ ಕಟ್ಟಡ, ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ , ಕಲಾವಿದ ಕದ್ರಿ ನವನೀತ, ಅಜೆಕಾರ್ ಬಾಲಕೃಷ್ಣ ಇದ್ದರು.
ಬಳಿಕ ರಕ್ಷಿತ್ ಪಡ್ರೆ ನೇತೃತ್ವದಲ್ಲಿ ನಡೆದ ಶ್ವೇತಕುಮಾರ ಚರಿತ್ರೆ ಯಕ್ಷ-ನಾಟಕ ಜನ ಮೆಚ್ಚುಗೆ ಗಳಿಸಿತು.