×
Ad

ಬಂಟ್ವಾಳ: ಲಾರಿ - ಕೆಎಸ್ಸಾರ್ಟಿಸಿ ಬಸ್‌ ಢಿಕ್ಕಿ; ವಿದ್ಯಾರ್ಥಿನಿ ಸೇರಿ ಎಂಟು ಮಂದಿಗೆ ಗಾಯ

Update: 2024-05-29 19:31 IST

ಬಂಟ್ವಾಳ : ಲಾರಿಯೊಂದು ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿಯಾದ ಪರಿಣಾಮ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿ ಸೇರಿದಂತೆ ಒಟ್ಟು ಎಂಟು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವಗ್ಗ ಸಮೀಪದ ಕಾಡುಬೆಟ್ಟು ಕ್ರಾಸ್ ಬಳಿ ನಡೆದಿದೆ.

ಬಸ್ ಚಾಲಕ ಉಮೇಶ್, ಪ್ರಯಾಣಿಕರಾದ ನಳಿನಿ ಬೆಳ್ತಂಗಡಿ, ವಿದ್ಯಾರ್ಥಿ‌ನಿ ಮಧುರಾ ಇರ್ವತ್ತೂರು, ರಕ್ಷಣ್ ವೇಣು ಗೋಪಾಲ ಕಾವಳಪಡೂರು, ತಾರಾನಾಥ ಗರ್ಡಾಡಿ, ರೋಹಿಣಿ ಮದ್ದಡ್ಕ, ಲಾರಿ ಚಾಲಕ ಚಿತ್ರದುರ್ಗ ಸಮೀಪದ ಹಿರಿಯೂರಿ‌ನ ಮಹೇಶ್ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಬಿ.ಸಿ.ರೋಡು – ಕಡೂರು ರಾಜ್ಯ ಹೆದ್ದಾರಿಯ ವಗ್ಗ ಸಮೀಪದ ಕಾರಿಂಜ ಕಾಡಬೆಟ್ಟು ತಿರುವಿನಲ್ಲಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಸಂದರ್ಭ ಮಂಗಳೂರು ಕಡೆಯಿಂದ ಬೆಳ್ತಂಗಡಿ ಕಡೆಗೆ ಹೋಗುವ ಬಸ್ ಗೆ ಢಿಕ್ಕಿಯಾಗಿದೆ. ಈ ವೇಳೆ ಬಸ್ ಚಾಲಕ, ಅದರಲ್ಲಿದ್ದ ಪ್ರಯಾಣಿಕರು ಹಾಗೂ ಲಾರಿ ಚಾಲಕನಿಗೆ ಗಾಯವಾಗಿದೆ.

ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌






 


 


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News