×
Ad

ದ.ಕ. ಜಿಲ್ಲೆಯ ಪ್ರಮುಖ ಸಮಸ್ಯೆಗಳ ಬಗ್ಗೆ ಸಚಿವರ ಜೊತೆ ಸ್ಪೀಕರ್ ಯು.ಟಿ ಖಾದರ್ ಚರ್ಚೆ

Update: 2024-07-25 22:15 IST

ಮಂಗಳೂರು: ದ.ಕ.ಜಿಲ್ಲೆ ಸಹಿತ ಕರಾವಳಿ ಭಾಗದ ಪ್ರಮುಖ ಸಮಸ್ಯೆಗಳ ನಿವಾರಣೆ ಹಾಗೂ ಅಭಿವೃದ್ಧಿಗೆ ಸಂಬಂಧಿಸಿದಂತೆ ಸ್ಪೀಕರ್ ಯು.ಟಿ. ಖಾದರ್ ಅವರು ಗುರುವಾರ ವಿಧಾನಸೌಧದಲ್ಲಿ ಪ್ರಮುಖ ಇಲಾಖೆಗಳ ಐವರು ಸಚಿವರುಗಳ ಜೊತೆ ವಿಸ್ತೃತ ಚರ್ಚೆ ನಡೆಸಿದರು.

ವಸತಿ ಮತ್ತು ವಾಣಿಜ್ಯ ಸಂಬಂಧ ಭೂಪರಿವರ್ತನೆ, ಜಮೀನುಗಳ ಏಕವಿನ್ಯಾಸ ನಕ್ಷೆಗಳಿಗೆ ಅನುಮೋದನೆ ನೀಡುವ ಪ್ರಕ್ರಿಯೆಯು ವಿಳಂಬವಾಗುತ್ತಿದೆ. ಅದರಲ್ಲೂ 9-11, ಫಾರ್ಮ್ 3, ಜಮೀನು ನೋಂದಣಿ ಪ್ರಕ್ರಿಯೆಯು ಸಮಸ್ಯೆಯಾಗಿದೆ. ಇದರಿಂದ ಜನಸಾಮಾನ್ಯರು ಕಚೇರಿಯಿಂದ ಕಚೇರಿಗೆ ಅಲೆದಾಡುವಂತಾಗಿದೆ. ಈ ನಿಟ್ಟಿನಲ್ಲಿ ಒಂದಕ್ಕೊಂದು ಪೂರಕ ವಾಗಿರುವ ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಪೌರಾಡಳಿತ, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಇಲಾಖೆಗೆ ಸಂಬಂಧಿಸಿದಂತೆ ಸಚಿವರಾದ ಕೃಷ್ಣ ಬೈರೇಗೌಡ, ಪ್ರಿಯಾಂಕ ಖರ್ಗೆ, ರಹೀಂ ಖಾನ್, ಬೈರತಿ ಸುರೇಶ್ ಜೊತೆ ಸ್ಪೀಕರ್ ಚರ್ಚಿಸಿದರು.

ಒಂದು ವಾರದ ಒಳಗಾಗಿ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದರು. ಈ ಸಂದರ್ಭ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಈ ಎಲ್ಲಾ ಇಲಾಖೆಗಳ ಹಿರಿಯ ಅಧಿಕಾರಿಗಳು ಮತ್ತು ದ.ಕ.-ಉಡುಪಿ ಜಿಲ್ಲೆಯ ಎಲ್ಲಾ ಶಾಸಕರು ಸಭೆಯಲ್ಲಿ ಉಪಸ್ಥಿತರಿದ್ದರು.

ಜಾಗದ ನೋಂದಣಿ, ಕನ್‌ವರ್ಶನ್, ಕಟ್ಟಡಕ್ಕೆ ಅನುಮತಿ, ನೀಲನಕಾಶೆ ಹೀಗೆ ಒಂದೊಂದು ಪ್ರಕ್ರಿಯೆ ಮುಗಿಸಲು ಸಾಕಷ್ಟು ಸಮಯ ಬೇಕಾಗುತ್ತದೆ. ಇದಕ್ಕಾಗಿ ಜನಸಾಮಾನ್ಯರು ಒಂದೊಂದು ಕಚೇರಿಗೆ ಅಲೆದಾಡುವುದು ಸಾಮಾನ್ಯವಾಗಿದೆ. ಇದನ್ನು ತಪ್ಪಿಸಲೇ ಬೇಕಿದೆ. ಹಾಗಾಗಿ ಈ ಎಲ್ಲಾ ಸಮಸ್ಯೆಗೆ ಶೀಘ್ರ ಪರಿಹಾರ ಕಲ್ಪಿಸಬೇಕಿದೆ. ಅದಕ್ಕಾಗಿ ಶೀಘ್ರ ಪರಿಹಾರ ಕಂಡುಕೊಳ್ಳಲು ಸೂಚನೆ ನೀಡಲಾಗಿದೆ ಎಂದು ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.

















Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News