ವಿಟ್ಲ| ಈಡಿ ಅಧಿಕಾರಿಗಳ ಸೋಗಿನಲ್ಲಿ ಉದ್ಯಮಿಯ ಮನೆಗೆ ದಾಳಿ ಪ್ರಕರಣ: ಓರ್ವ ಅಂತರಾಜ್ಯ ದರೋಡೆಕೋರ ಸೆರೆ
Update: 2025-01-23 17:39 IST
ವಿಟ್ಲ: ಬೋಳಂತೂರು ನಾರ್ಶ ಎಂಬಲ್ಲಿ ಉದ್ಯಮಿಯೊಬ್ಬರ ಮನೆಗೆ 6 ಮಂದಿಯ ತಂಡವೊಂದು ಈಡಿ ಅಧಿಕಾರಿಗಳೆಂದು ನಂಬಿಸಿ, ಸುಮಾರು 30 ಲಕ್ಷ ರೂ. ದರೋಡೆ ಮಾಡಿ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಅಂತರಾಜ್ಯ ದರೋಡೆಕೋರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಯನ್ನು ಕೇರಳದ ಕೊಲ್ಲಂ ನಿವಾಸಿ ಅನಿಲ್ ಫರ್ನಾಂಡಿಸ್ (49) ಎಂದು ಗುರುತಿಸಲಾಗಿದೆ.
ಈತನಿಂದ ಕೃತ್ಯಕ್ಕೆ ಉಪಯೋಗಿಸಿದ ಕಾರು, 5 ಲಕ್ಷ ರೂ. ನಗದು ಹಾಗೂ ಇತರ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿಯ ಪತ್ತೆ ಕಾರ್ಯಾಚರಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ವಿವಿಧ ಠಾಣೆಗಳಿಂದ, ಅಪರಾಧ ಪ್ರಕರಣಗಳಲ್ಲಿ ನುರಿತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಒಳಗೊಂಡ ನಾಲ್ಕು ವಿಶೇಷ ತನಿಖಾ ತಂಡ ಕಾರ್ಯನಿರ್ವಹಿಸಿರುತ್ತದೆ.