×
Ad

ಆಡಂಕುದ್ರು ಬಳಿ ಸರಣಿ ಅಪಘಾತ: ಬೈಕ್ ಸವಾರರಿಗೆ ಗಾಯ

Update: 2025-02-12 21:44 IST

ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿದ ಜೀಪೊಂದು ಕೇರಳ ಸಾರಿಗೆ ಬಸ್ಸಿನ ಹಿಂಬದಿಗೆ ಢಿಕ್ಕಿ ಹೊಡೆದು ಬಳಿಕ ಎಡ ಭಾಗದಿಂದ ಸಾಗುತ್ತಿದ್ದ ಬೈಕ್ ಗೆ ಢಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಆಡಂಕುದ್ರು ಎಂಬಲ್ಲಿ ಸಂಜೆ ವೇಳೆ ಸಂಭಾವಿಸಿದೆ. ಬೈಕ್ ಸವಾರರಿಬ್ಬರೂ ಗಾಯಗೊಂಡಿದ್ದಾರೆ.

ಮಂಗಳೂರು ಕಡೆಯಿಂದ ಕಾಸರಗೋಡು ಕಡೆಗೆ ಚಲಿಸುತ್ತಿದ್ದ ಕೇರಳ ಸಾರಿಗೆ ಬಸ್ಸಿನ ಹಿಂಬದಿಗೆ ಅತಿ ವೇಗ ಹಾಗೂ ಅಜಾಗರೂಕತೆಯ ಚಾಲನೆ ನಡೆಸಿದ ಜೀಪ್ ಚಾಲಕ ನಿಯಂತ್ರಣ ತಪ್ಪಿ ಢಿಕ್ಕಿ ಹೊಡೆದು ಬಳಿಕ ಎಡ ಭಾಗದಲ್ಲಿ ಸಂಚರಿಸುತ್ತಿದ್ದ ಬೈಕಿಗೆ ಜೀಪ್ ಢಿಕ್ಕಿ ಹೊಡೆದ ಬಳಿಕ ಕಂದಕಕ್ಕೆ ಉರುಳಿದೆ.

ಈ ಘಟನೆಯಿಂದ ರಾ.ಹೆ.ಯಲ್ಲಿ ಕೆಲವು ಘಂಟೆಗಳ ಕಾಲ ರಸ್ತೆ ಸಂಚಾರದಲ್ಲಿ ವ್ಯತ್ಯಾಸ ಉಂಟಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News