×
Ad

ಸದ್ಗುರು ಅವರ ಇಶಾ ಯೋಗಕೇಂದ್ರದಲ್ಲಿ ಡಿಕೆಶಿ ಭಾಗಿ: ಪಕ್ಷದ ನಾಯಕರು, ಪ್ರಗತಿಪರರಿಂದ ಆಕ್ಷೇಪ

Update: 2025-02-26 23:27 IST

ಪಿ.ವಿ.ಮೋಹನ್‌, ಡಾ. ಶ್ರೀನಿವಾಸ ಕಕ್ಕಿಲ್ಲಾಯ

ಮಂಗಳೂರು: ಕೊಯಮತ್ತೂರಿನ ಇಶಾ ಯೋಗಕೇಂದ್ರದಲ್ಲಿ ನಡೆಯಲಿರುವ ಮಹಾ ಶಿವರಾತ್ರಿ ಕಾರ್ಯಕ್ರಮದಲ್ಲಿ ಕರ್ನಾಟಕದ ಉಪಮುಖ್ಯ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಕೆಲವು ನಾಯಕರಿಂದ, ಪ್ರಗತಿಪರ ಚಿಂತಕರಿಂದ ಪರ ವಿರೋಧ ಅಭಿಪ್ರಾಯ ವ್ಯಕ್ತವಾಗಿದೆ.

ಸದ್ಗುರು ಶ್ರೀ ಜಗ್ಗಿ ವಾಸುದೇವ್ ಅವರು ಆಹ್ವಾನಿಸಿರುವ ಹಿನ್ನೆಲೆಯಲ್ಲಿ ಈ ಮಹೋನ್ನತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹಾಗೂ ಭಕ್ತಿ-ಭಾವಗಳಲ್ಲಿ ಮಿಂದೇಳಲು ಉತ್ಸುಕನಾಗಿದ್ದೇನೆ ಎಂದು ಡಿಕೆ ಶಿವಕುಮಾರ್ ಫೇಸ್‌ಬುಕ್‌ನಲ್ಲಿ ಬರೆದಿದ್ದರು. ಆಹ್ವಾನ ಪತ್ರವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಗ್ಗೆ ಅಪಹಾಸ್ಯ ಮಾಡಿದ ಸದ್ಗುರು ಜಗ್ಗಿ ವಾಸುದೇವ್ ಅವರು ಆಯೋಜಿಸಿರುವ ಶಿವರಾತ್ರಿ ಕಾರ್ಯಕ್ರಮದಲ್ಲಿ ಡಿ.ಕೆ.ಶಿವಕುಮಾರ್ ಭಾಗವಹಿಸುವ ವಿಚಾರದಲ್ಲಿ ಎಐಸಿಸಿ ಕಾರ್ಯದರ್ಶಿ ಪಿ.ವಿ.ಮೋಹನ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರಿಂದ ಪಕ್ಷದ ಕಾರ್ಯಕರ್ತರಿಗೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ಪಿ.ವಿ.ಮೋಹನ್ ತಮ್ಮ ಫೇಸ್‌ಬುಕ್ ಪುಟದಲ್ಲಿ ಬರೆದಿದ್ದಾರೆ.

‘‘ಈ ಕಾರ್ಯಕ್ರಮಕ್ಕೆ ಡಿಕೆಶಿ ಹೋಗಬಾರದು. ಒಬ್ಬ ಡಿಸಿಎಂ ಆಗಿ, ಅವರು ಅಂತಹ ಕಾರ್ಯಕ್ರಮಗಳಿಗೆ ಹಾಜರಾಗಬಾರದು ಮತ್ತು ಆಹ್ವಾನವನ್ನು ನಿರ್ಲಕ್ಷಿಸಬೇಕು’’ ಎಂದು ಪ್ರಗತಿಪರ ಚಿಂತಕರಾದ ಡಾ. ಶ್ರೀನಿವಾಸ ಕಕ್ಕಿಲ್ಲಾಯ ಹೇಳಿದ್ದಾರೆ.

Full View


Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News