×
Ad

ವಿಟ್ಲ: ಅಪಾಯಕಾರಿಯಾಗಿ ಖಾಸಗಿ ಬಸ್‌ ಸಂಚಾರ

Update: 2025-03-23 23:42 IST

ವಿಟ್ಲ : ಎರಡು ದಿನಗಳಿಂದ ಅಪಾಯಕಾರಿಯಾಗಿ ವಿಟ್ಲ -ಮುಡಿಪು ಮಧ್ಯೆ ಸಂಚರಿಸುತ್ತಿದ್ದ ಖಾಸಗಿ ಬಸ್ಸನ್ನು ಸಾರ್ವಜನಿಕರು ತಡೆದು ವಿಟ್ಲ ಪೊಲೀಸರಿಗೆ ಒಪ್ಪಿಸಿದ್ದಾರೆ.

ವಿಟ್ಲ-ಮುಡಿಪು-ಮಂಗಳೂರು ಮಧ್ಯೆ ಸಂಚರಿಸುವ ಸಾರಾ ಹೆಸರಿನ ಖಾಸಗಿ ಬಸ್ಸಿನ ಹಿಂದಿನ ಎಡಬದಿ ಯಲ್ಲಿ ಒಂದೇ ಟಯರಲ್ಲಿ ಸಂಚರಿಸುತ್ತಿತ್ತು‌. ಇನ್ನೊಂದು ಟಯರ್ ಒಡೆದು ಕರ್ಕಶ ಶಬ್ದ ಬರುತ್ತಿದ್ದರೂ ಚಾಲಕ, ಕಂಡಕ್ಟರ್ ಮುಂಜಾಗ್ರತೆ ವಹಿಸಿಲ್ಲ ಎಂದು ತಿಳಿದುಬಂದಿದೆ.

ಶನಿವಾರ ಮಧ್ಯಾಹ್ನದಿಂದ ರವಿವಾರ ಮಧ್ಯಾಹ್ನ ತನಕ ವಿಟ್ಲ - ಮುಡಿಪು - ಮಂಗಳೂರು ಮಧ್ಯೆ ಅಪಾಯಕಾರಿ ರೀತಿಯಲ್ಲಿ ಸಂಚರಿಸುತ್ತಾ ಪ್ರಯಾಣಿಕರ ಪ್ರಾಣದಲ್ಲಿ ಬಸ್ ಸಿಬ್ಬಂದಿ ಚೆಲ್ಲಾಟ ಆಡುತ್ತಿದ್ದರೆಂದು ಪ್ರಯಾಣಿಕರು ಆರೋಪಿಸಿದ್ದಾರೆ.

ಈ ಬಗ್ಗೆ ಮಾಹಿತಿ ಪಡೆದ ಸಾರ್ವಜನಿಕರು ಸಾಲೆತ್ತೂರು ಪೇಟೆಯಲ್ಲಿ ಬಸ್ಸನ್ನು ತಡೆ ಹಿಡಿದು ವಿಟ್ಲ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಬಂಟ್ವಾಳ ಸಾರಿಗೆ ಅಧಿಕಾರಿಗಳಿಗೂ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News