ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನ: ಮಂಗಳೂರು ಬಿಷಪ್ ಸಂತಾಪ
Update: 2025-06-12 21:36 IST
ಮಂಗಳೂರು, ಜೂ.12: ಗುಜರಾತಿನ ಅಹಮದಾಬಾದ್ ನಲ್ಲಿ ಸಂಭವಿಸಿದ ಭೀಕರ ವಿಮಾನ ದುರಂತಕ್ಕೆ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತಿ ವಂ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ದುರಂತದಲ್ಲಿ ಅಪಾರ ಸಾವು ನೋವು ಸಂಭವಿಸಿದ ಬಗ್ಗೆ ಆಘಾತ ವ್ಯಕ್ತ ಪಡಿಸಿರುವ ಅವರು ಸಾವನ್ನಪ್ಪಿರುವ ಪ್ರಯಾಣಿಕರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.
ಮೃತ ಪಟ್ಟವರ ಆತ್ಮಗಳಿಗೆ ದೇವರು ಚಿರ ಶಾಂತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ. ದುರಂತದಲ್ಲಿ ಗಾಯಗೊಂಡವರು ಬೇಗನೆ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.