×
Ad

ಮಂಗಳೂರು| ಭಾರೀ ಮಳೆಗೆ ಪಂಪ್‌ವೆಲ್, ಪಡೀಲ್ ಸೇತುವೆ ಜಲಾವೃತ

Update: 2025-06-14 16:57 IST

ಮಂಗಳೂರು: ಕಳೆದೆರಡು ದಿನಗಳಿಂದ ಸ್ವಲ್ಪ ತಗ್ಗಿದ್ದ ಮಳೆ ಶನಿವಾರ ಮಧ್ಯಾಹ್ನದಿಂದ ನಿರಂತರವಾಗಿ ಸುರಿದ ಪರಿಣಾಮ ಮಂಗಳೂರಿನ ಪಂಪ್‌ವೆಲ್ ವೃತ್ತ, ಪಡೀಲ್ ರೈಲ್ವೇ ಕೆಳ ಸೇತುವೆ ಜಲಾವೃತಗೊಂಡು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಪಂಪ್‌ವೆಲ್ ವೃತ್ತ ಜಲಾವೃತಗೊಂಡಿರುವ ಕಾರಣ ಸುತ್ತಮುತ್ತಲಿನ ಎಲ್ಲಾ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಕಳೆದ ಸುಮಾರು ಒಂದು ತಾಸಿನಿಂದ ಈ ರಸ್ತೆಗಳಲ್ಲಿ ವಾಹನಗಳ ಸರಾಗ ಸಂಚಾರಕ್ಕೆ ಸಾಧ್ಯವಾಗದೆ ವಾಹನ ದಟ್ಟಣೆ ಉಂಟಾಗಿದೆ.

ಈ ನಡುವೆ ಎಕ್ಕೂರು, ಜಪ್ಪಿನಮೊಗರುವಿನ ರಾಜಕಾಲುವೆಯೂ ತುಂಬಿ ಹರಿಯುತ್ತಿದ್ದು, ಸುತ್ತಮುತ್ತಲಿನ ಮನೆಗಳಲ್ಲಿ ಆತಂಕದ ವಾತಾವರಣ ಸೃಷ್ಟಿಸಿದೆ. ಭಾರೀ ಮಳೆಯಿಂದಾಗಿ ರಸ್ತೆಗಳಲ್ಲೇ ಭಾರೀ ಪ್ರಮಾಣದ ನೀರು ಹರಿಯುತ್ತಿದ್ದು, ವಾಹನ ಸವಾರರು ಪರದಾಡುವಂತಾಗಿದೆ.





 


 


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News