ಭ್ರಾಮರಿ ಆಮಂತ್ರಣ ಪತ್ರಿಕೆ ಬಿಡುಗಡೆ
Update: 2025-07-07 21:57 IST
ಮಂಗಳೂರು, ಜು.7: ಭ್ರಾಮರಿ ಯಕ್ಷಮಿತ್ರರು ಮಂಗಳೂರು ಟ್ರಸ್ಟ್ ಇದರ ಆಶ್ರಯದಲ್ಲಿ ನಡೆಯುವ 8ನೇ ವರ್ಷದ ಯಕ್ಷ ವೈಭವ 2025ರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಮಂಗಳೂರಿನ ವುಡ್‌ಲ್ಯಾಂಡ್ ಹೊಟೇಲ್‌ನಲ್ಲಿ ಸೋಮವಾರ ಸಂಜೆ ನಡೆಯಿತು. ಮಾಜಿ ಮೇಯರ್ ದಿವಾಕರ ಪಾಂಡೇಶ್ವರ ದೀಪ ಬೆಳಗಿಸಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಶುಭ ಹಾರೈಸಿದರು.
ಈ ಸಂದರ್ಭ ಭ್ರಾಮರಿ ಯಕ್ಷಮಿತ್ರರು ಟ್ರಸ್ಟ್‌ನ ಪ್ರಮುಖರಾದ ಸತೀಶ್ ಮಂಜೇಶ್ವರ, ವಿನಯ್ ಕೃಷ್ಣ ಕುರ್ನಾಡ್, ರವಿಶಂಕರ ಭಟ್, ಸೂರ್ಯನಾರಾಯಣ ಭಟ್, ಪರಮೇಶ್ವರ್ ಭಟ್ ಉಮೇಶ್ ಶೆಟ್ಟಿ, ಕೃಷ್ಣ ಮರ್ಕಮೆ, ಅಶ್ವಿತ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.