×
Ad

ಪುತ್ತೂರು| ಬಿಜೆಪಿ ಮುಖಂಡನ ಪುತ್ರನಿಂದ ಅತ್ಯಾಚಾರ-ವಂಚನೆ ಪ್ರಕರಣ: ಆರೋಪಿಯ ಮನೆಯಲ್ಲಿ ಪೊಲೀಸ್ ಮಹಜರು

Update: 2025-07-29 11:46 IST

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಗರ್ಭಿಣಿಯಾಗಿಸಿ ಸಹಪಾಠಿ ವಿದ್ಯಾರ್ಥಿನಿಗೆ ವಂಚಿಸಿದ ಪ್ರಕರಣದ ಆರೋಪಿ ಬಿಜೆಪಿ ಮುಖಂಡ ಪಿ.ಜಿ.ಜಗನ್ನಿವಾಸ್ ರಾವ್ ರ ಪುತ್ರ ಶ್ರೀಕೃಷ್ಣ ಜೆ. ರಾವ್ ಮನೆಯಲ್ಲಿ ಪುತ್ತೂರು ಮಹಿಳಾ ಠಾಣೆಯ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ.

ಇನ್ ಸ್ಪೆಕ್ಟರ್ ಸುನೀಲ್ ಕುಮಾರ್ ನೇತೃತ್ವದಲ್ಲಿ ಸೋಮವಾರ ಸಂಜೆ ಮಹಜರು ನಡೆಯಿತು. ಆರೋಪಿಯು ತನ್ನನ್ನು ಮದುವೆಯಾಗುವುದಾಗಿ ನಂಬಿಸಿ, ಬಪ್ಪಳಿಗೆಯ ಆತನ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಕರೆಸಿಕೊಂಡು ಬಲವಂತದ ದೈಹಿಕ ಸಂಪರ್ಕ ಬೆಳೆಸಿದ್ದಾಗಿ ಸಂತ್ರಸ್ತೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿಯ ಬಪ್ಪಳಿಗೆ ಮನೆಯಲ್ಲಿ ಮಹಜರು ನಡೆಯಿತು.

ಸಂತ್ರಸ್ತೆ ಮಗು ಮತ್ತು ತಾಯಿ, ಆರೋಪಿಯ ಸಹೋದರಿ, ಓರ್ವ ಸಾಕ್ಷಿದಾರ ಹಾಗೂ ವಕೀಲೆ ಉಪಸ್ಥಿತರಿದ್ದರು ಎಂದು ಮಾಹಿತಿ ಲಭಿಸಿದೆ.

ಪ್ರಕರಣದ ಆರೋಪಿ ಶ್ರೀಕೃಷ್ಣ.ಜೆ ರಾವ್ ಜಾಮೀನಿನಲ್ಲಿ ಬಿಡುಗಡೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಾಲಯ ಈಗಾಗಲೇ ವಜಾಗೊಳಿಸಿದೆ. ಆರೋಪಿಯು ನ್ಯಾಯಾಂಗ ಬಂಧನದಲ್ಲಿದ್ದಾನೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News