×
Ad

ಅ.27ರಿಂದ ನ.2: ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾಟ| ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಆಹ್ವಾನ

Update: 2025-10-09 14:02 IST

ಮಂಗಳೂರು, ಅ.9: ನಗರದಲ್ಲಿ ಅ.27 ರಿಂದ ನ. 2ರವರೆಗೆ ನಡೆಯಲಿರುವ ಚೀಫ್ ಮಿನಿಸ್ಟರ್ ಮಂಗಳೂರು ಇಂಡಿಯಾ ಇಂಟರ್ನ್ಯಾಷನಲ್ ಚಾಲೆಂಜ್ 2025 ಬ್ಯಾಡ್ಮಿಂಟನ್ ಪಂದ್ಯಾಟದ ಉದ್ಘಾಟನಾ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಘಟನಾ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ನ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಉಪಾಧ್ಯಕ್ಷ ಅಶೋಕ್ ಕುಮಾರ್ ಹೆಗಡೆ ಹಾಗೂ ಕಾರ್ಯದರ್ಶಿಯಾದ ಸುಪ್ರೀತ್ ಆಳ್ವ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News