×
Ad

ಜೂ.13 ರಂದು ಸಯ್ಯಿದ್ ಜಿಫ್ರಿ ಮುತ್ತುಕೋಯ ತಂಙಳ್ ಕಲ್ಲಡ್ಕಕ್ಕೆ

Update: 2025-06-12 09:29 IST

ಕಲ್ಲಡ್ಕ : ಇಲ್ಲಿನ ಮುಹಿಯುದ್ದೀನ್ ಜುಮಾ ಮಸೀದಿ ಇದರ ಅಧೀನದಲ್ಲಿ ನವೀಕೃತಗೊಂಡ ಮದ್ರಸ ಕಟ್ಟಡದ ಉದ್ಘಾಟನೆ, ಅಲ್-ಬಿರ್ರ್ ಆಂಗ್ಲ ಮಾಧ್ಯಮ ಶಾಲೆಯ ಉದ್ಘಾಟನೆ ಹಾಗೂ ಸನ್ಮಾನ ಕಾರ್ಯಕ್ರಮ ಜೂ.13 ರಂದು ಜುಮಾ ನಮಾಜಿನ ಬಳಿಕ ನಡೆಯಲಿದೆ.

ಕಾರ್ಯಕ್ರಮವನ್ನು ಸಮಸ್ತ ಕೇರಳ ಜಂ-ಇಯ್ಯತುಲ್ ಉಲಮಾ ಅಧ್ಯಕ್ಷ ಸಯ್ಯಿದುಲ್ ಉಲಮಾ ಸಯ್ಯಿದ್ ಜಿಫ್ರಿ ಮುತ್ತುಕೋಯ ತಂಙಳ್ ಉದ್ಘಾಟಿಸಲಿದ್ದು, ಅಲ್ ಬಿರ್ರ್ ಸ್ಕೂಲ್ಸ್ ನ ಆಡಳಿತ ನಿರ್ದೇಶಕ ಕೆ.ಪಿ.ಮುಹಮ್ಮದ್ ಕ್ಯಾಲಿಕೆಟ್-ಕೇರಳ, ಮಂಗಳೂರು ಖಾಝಿ ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್ ಸಹಿತ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಮಸೀದಿ ಪ್ರಧಾನ ಕಾರ್ಯದರ್ಶಿ ಅಬೂಬಕ್ಕರ್ ಸಿದ್ದೀಕ್ ಪನಾಮಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News