ಪುತ್ತೂರಿನಲ್ಲಿ ಮಹಿಳಾ ಪೊಲೀಸ್ ಠಾಣೆಗೆ ಒಂದು ಕೋಟಿ ರೂ. ಅನುದಾನ: ಗೃಹಸಚಿವ ಡಾ.ಜಿ.ಪರಮೇಶ್ಚರ್
Update: 2024-11-30 15:13 IST
ಪುತ್ತೂರು: ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಗೆ ಜಾಗದ ಜೊತೆಗೆ ಒಂದು ಕೋಟಿ ರೂ. ಅನುದಾನವೂ ಮಂಜೂರಾಗಿದೆ.
ಮಂಗಳೂರಿನಲ್ಲಿ ಇಂದು ನಡೆದ ಪೊಲೀಸ್ ವಸತಿ ಗೃಹ ಉದ್ಘಾಟನಾ ಕಾರ್ಯಕ್ರಮದಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಅನುದಾನ ಘೋಷಿಸಿದ್ದಾರೆ.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವೇದಿಕೆಯಲ್ಲಿ ಸಚಿವರಿಗೆ ಮಹಿಳಾ ಪೊಲೀಸ್ ಠಾಣೆಯ ಬಗ್ಗೆ ಮನವಿ ಸಲ್ಲಿಸಿದ್ದಾರೆ. ಈಗಾಗಲೇ ಜಾಗವನ್ನು ಗುರುತಿಸಲಾಗಿದೆ. ಇದಕ್ಕೆ ಸರಕಾರದಿಂದ ಅನುಮತಿ ಮತ್ತು ಹೊಸ ಕಟ್ಟಡಕ್ಕೆ ಅನುದಾನವನ್ನೂ ನೀಡಬೇಕು ಎಂದು ಶಾಸಕ ಅಶೋಕ್ ರೈ ಮನವಿಮಾಡಿದ್ದಾರೆ.
ಮನವಿಗೆ ತಕ್ಷಣ ಸ್ಪಂದಿಸಿದ ಸಚಿವರು ಮಹಿಳಾ ಪೊಲೀಸ್ ಠಾಣೆಗೆ ಜಾಗದ ಜೊತೆಗೆ ಕಟ್ಟಡ ನಿರ್ಮಾಣಕ್ಕೆ ಒಂದು ಕೋಟಿ ರೂ. ಅನುದಾನವನ್ನು ವೇದಿಕೆಯಲ್ಲೇ ಘೋಷಣೆ ಮಾಡಿದ್ದಾರೆ.