PM Modi | ಮಂಗಳೂರಿಗೆ ಪ್ರಧಾನಿ ಮೋದಿ ಆಗಮನ
Update: 2025-11-28 11:00 IST
ಮಂಗಳೂರು, ನ.28: ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ(PM Narendra Modi)ಯವರು ಶುಕ್ರವಾರ ಬೆಳಗ್ಗೆ ಮಂಗಳೂರಿಗೆ ಆಗಮಿಸಿದ್ದಾರೆ.
ಹೊಸದಿಲ್ಲಿಯಿಂದ ಭಾರತೀಯ ವಾಯುಪಡೆ ವಿಮಾನದಲ್ಲಿ ಬೆಳಗ್ಗೆ 10:25ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನ ಮಂತ್ರಿಯವರನ್ನು, ರಾಜ್ಯ ಸರಕಾರದ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ರಾಜೇಶ್ ನಾಯಕ್, ಭಾಗೀರಥಿ ಮುರುಳ್ಯ, ಗ್ರೇಟರ್ ಬೆಂಗಳೂರು ಆಯುಕ್ತ ಮಹೇಶ್ವರ ರಾವ್, ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಮತ್ತಿತರರು ಉಪಸ್ಥಿತರಿದ್ದು, ಪ್ರಧಾನಿಯವರನ್ನು ಸ್ವಾಗತಿಸಿದರು.
ಬಳಿಕ ಪ್ರಧಾನ ಮಂತ್ರಿ ವಾಯುಪಡೆಯ ಹೆಲಿಕಾಪ್ಟರ್ ನಲ್ಲಿ ಉಡುಪಿಗೆ ತೆರಳಿದರು.