ಮಂಗಳೂರು ನಗರ ಪೊಲೀಸ್ ನೂತನ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ
Update: 2025-05-30 21:38 IST
ಮಂಗಳೂರು: ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ.
ನಿರ್ಗಮನ ಆಯುಕ್ತ ಅನುಪಮ್ ಅಗರ್‌ವಾಲ್ ಅವರಿಂದ ಅಧಿಕಾರ ಸ್ವೀಕರಿಸಿರುವ ಸುಧೀರ್ ಕುಮಾರ್ ರೆಡ್ಡಿ 2010ರ ಬ್ಯಾಚ್‌ನ ಅಧಿಕಾರಿಯಾಗಿದ್ದರು. ಗುಪ್ತಚರ ಇಲಾಖೆಯ ಡಿಐಜಿ ಆಗಿ ಕಾರ್ಯನಿರ್ವಹಿಸಿದ್ದರು. ಆಂಧ್ರಪ್ರದೇಶದ ಗುಂಟೂರು ಮೂಲದ ಸುಧೀರ್ ಕುಮಾರ್ ರೆಡ್ಡಿ 2017-18ರಲ್ಲಿ ದ.ಕ.ಜಿಲ್ಲಾ ಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದರು.