×
Ad

ಎಸೆಸೆಲ್ಸಿ, ಪಿಯುಸಿ ಬ್ಯಾರಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

Update: 2024-05-18 17:22 IST

ಬೆಂಗಳೂರು, ಮೇ 18: ಪ್ರಸಕ್ತ (2023-24ನೇ) ಸಾಲಿನ ಎಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ ಬ್ಯಾರಿ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಮತ್ತು ನಗದು ಬಹುಮಾನವನ್ನು ನೀಡಲು ಬೆಂಗಳೂರಿನ ಬ್ಯಾರೀಸ್ ವೆಲ್ಫೇರ್ ಅಸೋಸಿಯೇಶನ್ ನಿರ್ಧರಿಸಿದ್ದು, ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಪಿಯುಸಿಯಲ್ಲಿ ಆರ್ಟ್ಸ್, ಕಾಮರ್ಸ್ ಮತ್ತು ಸೈನ್ಸ್ ವಿಭಾಗದಲ್ಲಿ ಶೇ.80 ಹಾಗೂ ಎಸೆಸೆಲ್ಸಿಯಲ್ಲಿ ಶೇ.85ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. CBSE ಮತ್ತು ICSCE  ವಿದ್ಯಾರ್ಥಿಗಳೂ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಮೇ 27 ಕೊನೆಯ ದಿನವಾಗಿದ್ದು, cao.bsb@bearys welfareassociation.org ಮತ್ತು chaiyabba@gmail.comಗೆ ಅರ್ಜಿ ಕಳುಹಿಸಬೇಕು. ಹೆಚ್ಚಿನ ಮಾಹಿತಿಗೆ ಮೊ.ಸಂ.: 9448853651 ಅಥವಾ 9844345041 ಅನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News