×
Ad

ಉಡುಪಿ-ಕಾಸರಗೋಡು ವಿದ್ಯುತ್ ಪ್ರಸರಣ ಮಾರ್ಗ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನಾ ರ್‍ಯಾಲಿ

Update: 2025-02-20 11:02 IST

ಮಂಗಳೂರು: ಉಡುಪಿ- ಕಾಸರಗೋಡು 400 ಕೆವಿ ಮತ್ತು ಪಾಲಡ್ಕ-ಕಡಂದಲೆ 400/220 ಕೆವಿ ವಿದ್ಯುತ್ ಪ್ರಸರಣ ಮಾರ್ಗವನ್ನು ವಿರೋಧಿಸಿ ಕೆಥೊಲಿಕ್ ಸಭಾ ಮಂಗಳೂರು ಪ್ರದೇಶ, ಕೆಥೊಲಿಕ್ ಸಭಾ ಉಡುಪಿ ಪ್ರದೇಶ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಗರದಲ್ಲಿ ಗುರುವಾರ ಬೆಳಗ್ಗೆ ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಯಿತು.

 

ನಗರದ ಬಲ್ಮಠದ ಸಿಎಸ್ ಐ ಮೈದಾನದಿಂದ ಕ್ಲಾಕ್ ಟವರ್ ತನಕ ನಡೆದ ಪ್ರತಿಭಟನಾ ರ್‍ಯಾಲಿಗೆ ಮಂಗಳೂರು ಕೆಥೊಲಿಕ್ ಧರ್ಮಪ್ರಾಂತದ ಸಾರ್ವಜನಿಕ ಸಂಪರ್ಕ ಅಧಿಕಾರಿ ಫಾ.ಜೆ.ಬಿ.ಸಲ್ದಾನ ಪ್ರತಿಭಟನಾಕಾರರಿಗೆ ಹಸಿರು ಧ್ವಜವನ್ನು ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು.

 

 

ಪ್ರತಿಭಟನೆಗೆ ಹಲವು ಮಂದಿ ಧರ್ಮಗುರುಗಳು, ಕೆಥೊಲಿಕ್ ಸಭಾದ ಧುರೀಣರು, ರೈತರು ನೇತೃತ್ವ ನೀಡಿದ್ದಾರೆ.

ಜಾಥಾದಲ್ಲಿ ಮೂರು ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು.

 

 

 

 

 

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News