×
Ad

ಪಂಪ್‌ವೆಲ್: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳಿಗೆ ಹಲ್ಲೆ; ಆರೋಪ

Update: 2024-09-02 12:42 IST

ಮಂಗಳೂರು: ವಿಟ್ಲದಿಂದ ಮಂಗಳೂರು ಕಡೆಗೆ ಬರುತ್ತಿದ್ದ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ವಿದ್ಯಾರ್ಥಿಗಳಿಗೆ ‌ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ‌ಹಲ್ಲೆ ನಡೆಸಿದ ಘಟನೆ ಸೋಮವಾರ ಬೆಳಗ್ಗೆ ನಾಗುರಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಹಲ್ಲೆಗೊಳಗಾದವ ವಿದ್ಯಾರ್ಥಿಗಳನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ‌ ಎಂದು ತಿಳಿದು ಬಂದಿದೆ. ಮೂವರು ವಿದ್ಯಾರ್ಥಿಗಳು ಫರಂಗಿಪೇಟೆಯಿಂದ ಮಂಗಳೂರು ಕಡೆಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಈ ಬಸ್ಸಿನಲ್ಲಿ ‌ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ನಾಗುರಿಯಲ್ಲಿ ಹಲ್ಲೆ ನಡೆಸಿ ಪಂಪ್‌ ವೆಲ್‌ ನಲ್ಲಿ ಬಸ್ಸಿನಿಂದ ಇಳಿದು ಹೋದ ಎಂದು ಆರೋಪಿಸಲಾಗಿದೆ.

ವಿದ್ಯಾರ್ಥಿಗಳು ಫರಂಗಿಪೇಟೆ ಸಮೀಪದ ಅಮ್ಮೆಮಾರ್ ನಿವಾಸಿಗಳಾಗಿದ್ದು, ಖಾಸಗಿ ಟ್ಯುಟೋರಿಯಲ್‌ವೊಂದರ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News