ಪುತ್ತೂರು: ಫೇಸ್‍ಬುಕ್ ನಲ್ಲಿ ಸುಳ್ಳು ಪ್ರಸಾರ; ದೂರು ದಾಖಲು
Update: 2025-08-06 14:26 IST
ಪುತ್ತೂರು: ಸಾಮಾಜಿಕ ಜಾಲತಾಣವಾದ ಫೇಸ್‍ಬುಕ್ ನಲ್ಲಿ ಸುಳ್ಳು ಮಾಹಿತಿ ಪ್ರಸಾರ ಮಾಡಿದ ಆರೋಪದಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜು.14ರಂದು ವ್ಯಕ್ತಿಯೊಬ್ಬ ಸಾರ್ವಜನಿಕವಾಗಿ ತಲವಾರು ಪ್ರದರ್ಶಿಸಿದ ಘಟನೆಗೆ ಸಂಬಂಧಿಸಿದಂತೆ “ನಾವು ಭಾರತೀಯ ಸೇನೆ” ಎಂಬ ಫೇಸ್‌ಬುಕ್ ಪುಟದಲ್ಲಿ ಎಸ್.ಡಿ.ಪಿ.ಐ. ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಆಶ್ರಫ್ ಬಾವು ಎಂಬಾತ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಿರುವ ಆರೋಪದಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.