ಪುತ್ತೂರು: ಬ್ರೇಕ್ ವೈಫಲ್ಯಗೊಂಡ ಪರಿಣಾಮ ನಿಯಂತ್ರಣ ತಪ್ಪಿದ ಕೆಎಸ್ಸಾರ್ಟಿಸಿ ಬಸ್ ಮನೆಯ ಕಾಂಪೌಂಡ್‌ಗೆ ಢಿಕ್ಕಿ ಹೊಡೆದ ಘಟನೆ ಬುಧವಾರ ಬೆಳಗ್ಗೆ ಪುತ್ತೂರಿನ ದರ್ಬೆಯಲ್ಲಿ ನಡೆದಿದೆ.

ಪುತ್ತೂರಿನಿಂದ ಕುಂಬ್ರದತ್ತ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಬೆಳಗ್ಗೆ ಸುಮಾರು 8 ಗಂಟೆಗೆ ದರ್ಬೆ ವೃತ್ತವನ್ನು ದಾಟಿ ಫಿಲೋಮಿನಾ ಕಾಲೇಜು ಸಮೀಪ ತಲುಪುತ್ತಿದ್ದಂತೆ ಬ್ರೇಕ್ ವೈಫಲ್ಯಗೊಂಡು ನಿಯಂತ್ರಣ ತಪ್ಪಿದೆ ಎನ್ನಲಾಗಿದೆ.

ಬಸ್ ರಸ್ತೆ ಬದಿಯಿಂದ ಸುಮಾರು 50 ಅಡಿ ದೂರ ಸಾಗಿ ಮನೆಯ ಕಾಂಪೌಂಡ್‌ಗೆ ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.

ಅಪಘಾತದಲ್ಲಿ ಯಾವುದೇ ಗಾಯ-ಹಾನಿ ಸಂಭವಿಸಿಲ್ಲ. ಬಸ್ಸಿನಲ್ಲಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಇರಲಿಲ್ಲ ಎನ್ನಲಾಗಿದೆ. ಬಳಿಕ ಕ್ರೇನ್ ಸಹಾಯದಿಂದ ಬಸ್ಸನ್ನು ತೆರವುಗೊಳಿಸಲಾಯಿತು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor