×
Ad

ಪುತ್ತೂರು | ಕಟ್ಟಡವೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪ: ಇಬ್ಬರು ಆರೋಪಿಗಳ ಬಂಧನ

Update: 2025-07-02 13:21 IST

ಸಾಂದರ್ಭಿಕ ಚಿತ್ರ

ಪುತ್ತೂರು: ನಗರದ ಸಾಮೆತ್ತಡ್ಕ ಎಂಬಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಸಾಮೆತ್ತಡ್ಕ ನಿವಾಸಿ ವಿಲ್ಫ್ರೆಡ್ ಎಂಬಾತ ತನ್ನ ಮನೆಯ ಸಮೀಪದ ಕಟ್ಟಡವೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾನೆ ಎಂಬ ಖಚಿತ ದೂರಿನ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ನಿರೀಕ್ಷಕರು ಮತ್ತು ಸಿಬ್ಬಂದಿ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡರು.

ಘಟನೆಗೆ ಸಂಬಂಧಿಸಿದಂತೆ ದ.ಕ. ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. (ಅಪರಾಧ ಕ್ರಮಾಂಕ: 51/2025). ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ, 2023ರ ಕಲಂ 143(2) ಹಾಗೂ ಅನೈತಿಕ ಸಾಗಾಣಿಕೆ (ತಡೆ) ಕಾಯ್ದೆ, 1956ರ ಕಲಂ 3, 4, ಮತ್ತು 5(3)ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲವು ಜು.15 ರ ತನಕ ನ್ಯಾಯಾಂಗ ಬಂಧನ ವಿಧಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News