×
Ad

ಅರುಣ್ ಕುಮಾರ್ ಪುತ್ತಿಲ‌ ವಿರುದ್ಧ ಅತ್ಯಾಚಾರ ಪ್ರಕರಣ: ಎಫ್‍ಐಆರ್, ಮುಂದಿನ ತನಿಖೆಗೆ ಹೈಕೋರ್ಟ್‌ ತಡೆಯಾಜ್ಞೆ

Update: 2024-09-10 20:29 IST

ಅರುಣ್ ಕುಮಾರ್ ಪುತ್ತಿಲ

ಬೆಂಗಳೂರು: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ತಮ್ಮ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದ ರದ್ದು ಕೋರಿ ಅರುಣ್ ಕುಮಾರ್ ಪುತ್ತಿಲ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಎಫ್ಐಆರ್ ಜೊತೆಗೆ ಪುತ್ತೂರಿನ ಪ್ರಧಾನ ಸಿವಿಲ್ ನ್ಯಾಯಾಧೀಶ ಹಾಗೂ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಅರುಣ್ ಕುಮಾರ್ ಪುತ್ತಿಲ ಪರ ಹಿರಿಯ ವಕೀಲ ಪಿ.ಪಿ. ಹೆಗ್ಡೆ ವಾದ ಮಂಡಿಸಿ, ದೂರುದಾರ ಮಹಿಳೆಗೆ ಈಗ 47 ವರ್ಷ. ಒಂದು ವರ್ಷದ ಹಿಂದೆ ಅಂದರೆ 2023ರ ಜೂನ್ ತಿಂಗಳಲ್ಲಿ ನಡೆದಿದೆ ಎನ್ನಲಾದ ಘಟನೆ ಸಂಬಂಧ ಈಗ ಅಂದರೆ ಸೆ.2ರಂದು ಎಫ್‌ಐಆರ್ ದಾಖಲಿಸಿದ್ದಾರೆ. ತಮ್ಮ ಕಕ್ಷಿದಾರನ ಗೌರವಕ್ಕೆ ಧಕ್ಕೆ ತರುವ ಹೇಳಿಕೆಗಳನ್ನು ನೀಡಬಾರದು ಎಂದು ಆ.28ರಂದು ಬೆಂಗಳೂರಿನ ಸಿವಿಲ್ ನ್ಯಾಯಾಲಯ ನಿರ್ಬಂಧಕ ಆದೇಶ ಹೊರಡಿಸಿದ ಬಳಿಕ, ಅತ್ಯಾಚಾರ, ಲೈಂಗಿಕ ಶೋಷಣೆಯ ಆರೋಪದ ಎಫ್‌ಐಆರ್ ದಾಖಲಾಗಿದೆ. ಅಲ್ಲಿವರೆಗೆ ಈ ವಿಷಯವೇ ಇರಲಿಲ್ಲ. ಹಾಗಾಗಿ, ಇದೊಂದು ದುರುದ್ದೇಶಪೂರಿತ ಪ್ರಕರಣವಾಗಿದೆ. ದೂರುದಾರರ ನಡವಳಿಕೆ ಅಸಹಜ ಮತ್ತು ಅನುಮಾನಾಸ್ಪದವಾಗಿದೆ. ಮುಖ್ಯವಾಗಿ ದೂರು ದಾಖಲಿಸಲು ಒಂದೂವರೆ ವರ್ಷ ವಿಳಂಬವಾಗಿದೆ. ಆದ್ದರಿಂದ ಪ್ರಕರಣ ರದ್ದುಪಡಿಸುವಂತೆ ಹಿರಿಯ ವಕೀಲ ಪಿ.ಪಿ.ಹೆಗ್ಡೆ ವಾದಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News