ದ.ಕ. ಜಿಲ್ಲೆಯಲ್ಲಿ ರೆಡ್ ಅಲರ್ಟ್: ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ತುರ್ತು ಕ್ರಮ
ಎನ್‌ಡಿಆರ್‌ಎಫ್ ತಂಡ
ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದ.ಕ. ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದ್ದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಕ್ರಮಗಳನ್ನು ಕೈಗೊಂಡಿದ್ದು, ವಿವರ ಇಂತಿವೆ.
►ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ಇನ್ಸಿಡೆಂಟ್ ಕಮಾಂಡರ್‌ಗಳು ಸದಾ ಜಾಗೃತರಾಗಿದ್ದು. ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಲಿದ್ದು, ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಲು ನಿರ್ದೇಶನ ನೀಡಲಾಗಿದೆ.
►ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ 60 ವಾರ್ಡ್‌ಗಳಿಗೆ ಇಂಜಿನಿಯರ್‌ಗಳನ್ನು, 223 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, 13 ಸ್ಥಳೀಯ ಸಂಸ್ಥೆಗಳಲ್ಲಿ ಮುಖ್ಯಾಧಿಕಾರಿಗಳನ್ನು ಇನ್ಸಿಡೆಂಟ್ ಕಮಾಂಡರ್‌ಗಳಾಗಿ ನೇಮಿಸಲಾಗಿದೆ.
►ಜಿಲ್ಲೆಯ ಎಲ್ಲಾ ಇನ್ಸಿಡೆಂಟ್ ಕಮಾಂಡರ್‌ಗಳು ತಮ್ಮ ವ್ಯಾಪ್ತಿಯ ಪ್ರದೇಶಗಳಿಗೆ ಭೇಟಿ ನೀಡಿ ಮುಂಜಾಗ್ರತಾ ಹಾಗೂ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಸೂಚನಾ ನೀಡಲಾಗಿದೆ.
►ಜಿಲ್ಲೆಯಲ್ಲಿ 135 ಕಾಳಜಿ ಕೇಂದ್ರವನ್ನು ಗುರುತಿಸಲಾಗಿದೆ. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ಸನ್ನದ್ಧ ಸ್ಥಿತಿಯಲ್ಲಿ ಇಟ್ಟುಕೊಳ್ಳುವಂತೆ ಸೂಚಿಸಲಾಗಿದೆ.
►ಶಾಲೆ ಮತ್ತು ಅಂಗನವಾಡಿಗಳ ಹತ್ತಿರದ ಪ್ರದೇಶದಲ್ಲಿ ಅಪಾಯಕಾರಿ ಮರಗಳ ಕೊಂಬೆ ವಿದ್ಯುತ್ ತಂತಿಗಳಿದ್ದಲ್ಲಿ ಅವುಗಳ ಗುರುತಿಸಿದ್ದು, ಮೆಸ್ಕಾಂ ಮತ್ತು ಅರಣ್ಯ ಇಲಾಖೆಗೆ ತೆರವುಗೊಳಿಸಲು ನಿರ್ದೇಶನ ನೀಡಲಾಗಿದೆ.
►ಶಾಲೆಗಳ ಸುರಕ್ಷತೆಯ ಕುರಿತು ಇನ್ಸಿಡೆಂಟ್ ಕಮಾಂಡರ್ , ಇಂಜಿನಿಯರ್ ಮತ್ತು ಶಾಲಾ ಮುಖ್ಯೋಪಾಧ್ಯಾಯರು ಜಂಟಿ ಸಮೀಕ್ಷೆ ನಡೆಸಿ ಕಟ್ಟಡ ಸುರಕ್ಷತೆ ದೃಢೀಕರಣ ಪತ್ರವನ್ನು ನೀಡಲು ಸೂಚಿಸಲಾಗಿದೆ.
►25 ಸಿಬ್ಬಂದಿಯ ಎನ್‌ಡಿಆರ್‌ಎಫ್ ತಂಡವನ್ನು ಪುತ್ತೂರು ತಾಲೂಕುನಲ್ಲಿ ಹಾಗೂ 10 ಸಿಬ್ಬಂದಿಯ ಎಸ್‌ಡಿಆರ್‌ಎಫ್ ತಂಡ ವನ್ನು ಸುಬ್ರಹ್ಮಣ್ಯದಲ್ಲಿ ನಿಯೋಜಿಸಲಾಗಿದೆ.
►ತುರ್ತು ಸಂದರ್ಭದಲ್ಲಿ ರಕ್ಷಣಾ ಕಾರ್ಯ ನಿರ್ವಹಿಸಲು 26 ಬೋಟ್ ಜೆಸಿಬಿ ಯಂತ್ರ, ಟಿಪ್ಪರ್, ಕ್ರೇನ್ ಇತ್ಯಾದಿ ಸನ್ನದ್ದ ಸ್ಥಿತಿಯಲ್ಲಿರಿಸಲಾಗಿದೆ
►ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳುವುದನ್ನು ನಿಷೇಧಿಸಲಾಗಿದೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಸೂಚನೆ ನೀಡಲಾಗಿದೆ
►ಪ್ರವಾಸಿಗರು , ಸಾರ್ವಜನಿಕರು ಗುಡ್ಡ ಪ್ರದೇಶದ ಚಾರಣಕ್ಕೆ ನದಿ ತೀರಕ್ಕೆ, ಸಮುದ್ರ ತೀರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ
►ಜಿಲ್ಲೆಯಲ್ಲಿ ಅವಾಯಕಾರಿ ಪ್ರದೇಶ ಮತ್ತು ಕಾಲುಸಂಕ ಸೇತುವೆಗಳನ್ನು ಗುರುತಿಸಿ ಎಚ್ಚರಿಕೆ ಸೂಚನಾ ಫಲಕಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ.
►ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಲು ಸೂಚಿಸಲಾಗಿದೆ.
►ಅಪಾಯಕಾರಿ ವಿದ್ಯುತ್ ತಂತಿ ಹಾಗೂ ವಿದ್ಯುತ್ ಕಂಬದ ಹತ್ತಿರ ಬಗ್ಗೆ ಎಚ್ಚರ ವಹಿಸಬೇಕು ಹಾಗೂ ಅಂತಹ ಅಪಾಯಕಾರಿ ತಂತಿ, ಕಂಬಗಳು ಕಂಡುಬಂದಲ್ಲಿ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಬೇಕು.
►ಸಾರಿಗೆ ಪ್ರಾಧಿಕಾರ ಅಧಿಕಾರಿಗಳು ಮತ್ತು ಕೆಎಸ್‌ಆರ್‌ಟಿಸಿ ಅಧಿಕಾರಿಗಳನ್ನು ಸಂಪರ್ಕದಲ್ಲಿಟ್ಟುಕೊಂಡು ತುರ್ತು ಸಂದರ್ಭದಲ್ಲಿ ಅವಶ್ಯಕತೆ ಬಿದ್ದಲ್ಲಿ ಜನರನ್ನು ಕರೆದೊಯ್ಯಲು ಬಸ್‌ನ ವ್ಯವಸ್ಥೆಯನ್ನು ಮಾಡಲಾಗಿದೆ.
►ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆದೇಶ ನೀಡಿದ್ದಾರೆ.
ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ
ಜಿಲ್ಲಾ ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ 24 *7 ಕಂಟ್ರೋಲ್ ರೂಂ - 1077 / 0824-2442590
ಮಂಗಳೂರು ಮಹಾನಗರ ಪಾಲಿಕೆ - 0824-2220306/ 2220319
ಮಂಗಳೂರು ತಾಲೂಕು: 0824-2220587
ಉಳ್ಳಾಲ ತಾಲೂಕು: 0824-2204424
ಬಂಟ್ವಾಳ ತಾಲೂಕು: 7337669102
ಪುತ್ತೂರು ತಾಲೂಕು: 08251-230349
ಬೆಳ್ತಂಗಡಿ ತಾಲೂಕು: 08256-232047
ಸುಳ್ಯ ತಾಲೂಕು: 08257-231231
ಮೂಡಬಿದ್ರೆ ತಾಲೂಕು : 08258-238100
ಕಡಬ ತಾಲೂಕು: 08251-260435
ಮುಲ್ಕಿ ತಾಲೂಕು : 0824-2294496