ಅತ್ಯಾಚಾರ, ಕೊಲೆ ಪ್ರಕರಣದ ಮರುತನಿಖೆ ನಡೆಸಲು ಸೌಜನ್ಯ ಕುಟುಂಬಸ್ಥರಿಂದ ಸಿಎಂಗೆ ಮನವಿ
Update: 2023-07-26 19:58 IST
ಬೆಳ್ತಂಗಡಿ: ಅತ್ಯಾಚಾರ, ಕೊಲೆಯಾದ ಸೌಜನ್ಯ ಪ್ರಕರಣದ ಮರು ತನಿಖೆ ನಡೆಸುವಂತೆ ಒತ್ತಾಯಿಸಿ ಸೌಜನ್ಯಳ ಕುಟುಂಬಸ್ಥರು ಹಾಗೂ ಮಹೇಶ್ ಶೆಟ್ಟಿ ತಿಮರೋಡಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಸೌಜನ್ಯಳ ತಂದೆ ಚಂದಪ್ಪ ಗೌಡ, ತಾಯಿ ಕುಸುಮಾವತಿ, ಸಹೋದರಿ ಸೌಂದರ್ಯ ಹಾಗೂ ಮಹೇಶ್ ಶೆಟ್ಟಿ ತಿಮರೋಡಿ ಅವರು ಮುಖ್ಯಮಂತ್ರಿಯನ್ನು ಭೇಟಿಯಾಗಿ ಅವರೊಂದಿಗೆ ಮಾತುಕತೆ ನಡೆಸಿ ಪ್ರಕರಣದ ಬಗ್ಗೆ ಮರು ತನಿಖೆ ನಡೆಸಿ ತಮ್ಮ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಹಾಗೂ ಆರೋಪಿಗಳಿಗೆ ಶಿಕ್ಷೆ ನೀಡಲು ಕ್ರಮ ಕೈಗೊಳ್ಳುವಂತೆ ವಿನಂತಿಸಿದ್ದಾರೆ.