×
Ad

ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಶಂಸುಲ್ ಇಸ್ಲಾಂ ಉಪನ್ಯಾಸ ಕಾರ್ಯಕ್ರಮ; ಎಬಿವಿಪಿಯಿಂದ ಪ್ರತಿಭಟನೆ

Update: 2023-09-09 11:10 IST

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಬಿ.ವಿ ಕಕ್ಕಿಲ್ಲಾಯ ಪ್ರತಿಷ್ಠಾನ ಆಯೋಜಿಸಿರುವ ದೆಹಲಿ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಶಂಸುಲ್ ಇಸ್ಲಾಂ ಅವರ ಉಪನ್ಯಾಸ ಕಾರ್ಯಕ್ರಮದ ವಿರುದ್ಧ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕಾಲೇಜು ವಿದ್ಯಾರ್ಥಿಗಳ ಹೊರತಾಗಿ ಪ್ರತಿಭಟನೆಯಲ್ಲಿ ಭಾಗಿಯಾಗಿ ಕಾರ್ಯಕ್ರಮದ ವಿರುದ್ಧ ಘೋಷಣೆ ಕೂಗಿದ 10ಕ್ಕೂ ಮಿಕ್ಕ ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ‌. 

ವಿವಿಯ ರವೀಂದ್ರ ಕಲಾಭವನದಲ್ಲಿ ಶಂಸುಲ್ ಇಸ್ಲಾಂ ಅವರ ಉಪನ್ಯಾಸ ಕಾರ್ಯಕ್ರಮ ನಡೆಯುತ್ತಿದ್ದು, ಕಾಲೇಜಿನ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News