×
Ad

ಸೋಮೇಶ್ವರ: ಕೇರಳ ಮೂಲದ ವಿದ್ಯಾರ್ಥಿಗಳನ್ನು ತಡೆದು ಅನೈತಿಕ ಪೊಲೀಸ್‌ ಗಿರಿ ನಡೆಸಿದ ಸಂಘಪರಿವಾರದ ಕಾರ್ಯಕರ್ತರು

Update: 2023-12-26 13:04 IST

ಉಳ್ಳಾಲ: ಕೇರಳ ಮೂಲದ ವಿದ್ಯಾರ್ಥಿಗಳನ್ನು ತಡೆದು ಸಂಘಪರಿವಾರದ ಕಾರ್ಯಕರ್ತರು ಅನೈತಿಕ ಪೊಲೀಸ್‌ ಗಿರಿ ನಡೆಸಿರುವ ಘಟನೆ ತಾಲೂಕಿನ ಸೋಮೇಶ್ವರ ಬೀಚ್ ಬಳಿ ಸೋಮವಾರ ನಡೆದಿರುವ ಬಗ್ಗೆ ವರದಿಯಾಗಿದೆ.

ಉಳ್ಳಾಲದ ಖಾಸಗಿ ಕಾಲೇಜೊಂದರ ಇಬ್ಬರು ವಿದ್ಯಾರ್ಥಿನಿಯರು, ಇಬ್ಬರು ವಿದ್ಯಾರ್ಥಿಗಳನ್ನು ಆರೋಪಿಗಳು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ವಿದ್ಯಾರ್ಥಿಗಳು ದೇವಸ್ಥಾನಕ್ಕೆ ಆಗಮಿಸಿ ಸ್ಥಳೀಯವಾಗಿ ಸುತ್ತಾಡುತ್ತಿದ್ದ ವೇಳೆ ಸಂಘಪರಿವಾರದ ಕಾರ್ಯಕರ್ತರು ಪೊಲೀಸ್ ಕಂಟ್ರೋಲ್ ರೂಮ್‌ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ ಎನ್ನಲಾಗಿದ್ದು, ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ಉಳ್ಳಾಲ ಪೊಲೀಸರು ಠಾಣೆಯಲ್ಲಿ ವಿಚಾರಣೆ ನಡೆಸಿದ ಬಳಿಕ ಅವರನ್ನು ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News