×
Ad

ಸುಳ್ಯ: ವಿ‌ದ್ಯಾರ್ಥಿ ನಾಪತ್ತೆ

Update: 2023-11-18 15:39 IST

ಸುಳ್ಯ:  ವಿ‌ದ್ಯಾರ್ಥಿಯೊಬ್ಬ ನಾಪತ್ತೆಯಾದ ಘಟನೆ ಪೆರುವಾಜೆ ಗ್ರಾಮದಲ್ಲಿ ನಡೆದಿದೆ.

ಕುಂಡಡ್ಕ ಹನೀಪ್ ಇಂದ್ರಾಜೆ ಅವರ ಪುತ್ರ, ತಲಪಾಡಿ ಬಿಲಾಲ್ ಮಸೀದಿಯ ವಿದ್ಯಾರ್ಥಿ ಅಬೂಬಕ್ಕರ್ ಅಬೀಲ್ ಎಂಬ ಬಾಲಕ ನವೆಂಬರ್ 16 ರಿಂದ ಕಾಣೆಯಾಗಿದ್ದಾನೆ.

ಗುರುವಾರ ಸಂಜೆ ಮಸೀದಿಗೆ ಬಂದಿದ್ದ ಈತ ಅಲ್ಲಿಂದ ಅಂಗಡಿಗೆ ಹೋಗಿ ಬರುವುದಾಗಿ ಹೇಳಿ ಹೋದವನು ಮರಳಿ ಬಂದಿಲ್ಲ. ಪೋಷಕರು ಉಳ್ಳಾಲ ಠಾಣೆಯಲ್ಲಿ ದೂರು ನೀಡಿದ್ದು ಹುಡುಕಾಟ ನಡೆಸುತ್ತಿದ್ದಾರೆ.

ಗೋಧಿ ಮೈಬಣ್ಣ, ಎತ್ತರ ನಾಲ್ಕೂವರೆ ಅಡಿ ಉದ್ದವಿದ್ದು ಕಾಣಲು ಸೌಮ್ಯ ಸ್ವಭಾವದ ಬಾಲಕನಾಗಿದ್ದಾನೆ. ಯಾರಾದರೂ ಕಂಡು ಬಂದಲ್ಲಿ ತಕ್ಷಣ ಈ ನಂಬರಿಗೆ 9731293268, 9686123077 ಕರೆ ಮಾಡುವಂತೆ ಮನೆಯವರು ವಿನಂತಿಸಿಕೊಂಡಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News