ಬೆಳ್ತಂಗಡಿ: ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂಕೋರ್ಟ್ ಸೂಚನೆಯಂತೆ ರಾಜ್ಯ ಸರಕಾರ ಎಸ್.ಐ.ಟಿ ರಚಿಸಿದ್ದು, ಪೊಲೀಸ್ ಮಹಾ ನಿರೀಕ್ಷಕರಾದ ಎನ್. ಶಶಿಕುಮಾರ್ ಅವರನ್ನು ಎಸ್.ಐ.ಟಿ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.


ಸದಸ್ಯರಾಗಿ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ರಾಜ್ಯ ಗುಪ್ತವಾರ್ತೆಯ ಪೊಲೀಸ್ ಅಧೀಕ್ಷಕರಾದ ನಿಶಾ ಜೇಮ್ಸ್, ಬೆಂಗಳೂರು ಸಿಐಡಿ ಪೊಲೀಸ್ ಅಧೀಕ್ಷಕರಾದ ಲೋಕೇಶ್ ಜಲಸಾಗರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವೆಂಕಟೇಶ್ ಪ್ರಸನ್ನ ಅವರನ್ನು ಎಸ್.ಐ.ಟಿ ತಂಡದ ಸದಸ್ಯರಾಗಿ ನೇಮಿಸಿ ಸರಕಾರ ಆದೇಶ ನೀಡಿದೆ.


ಸುಧೀರ್ ಕುಮಾರ್ ರೆಡ್ಡಿ, ನಿಶಾ ಜೇಮ್ಸ್, ಲೋಕೇಶ್ ಜಲಸಾಗರ್, ವೆಂಕಟೇಶ್ ಪ್ರಸನ್ನ 



 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor