×
Ad

ಸುರತ್ಕಲ್: ಬೆಂಕಿ ಆಕಸ್ಮಿಕ; ಹೆದ್ದಾರಿ ಮಧ್ಯೆ ಸುಟ್ಟು ಕರಕಲಾದ ಕಾರು

Update: 2024-09-05 11:07 IST

ಸುರತ್ಕಲ್ : ರಾಷ್ಟ್ರಿಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಹಠಾತ್ತನೆ ಬೆಂಕಿಗೆ ಆಹುತಿಯಾಗಿರುವ ಘಟನೆ ಸುರತ್ಕಲ್ ಎನ್ ಐಟಿಕೆ ಹಳೆ ಟೋಲ್ ಗೇಟ್ ಬಳಿ ಗುರುವಾರ ಬೆಳಿಗ್ಗೆ ನಡೆದಿದೆ.

ಸುಟ್ಟು ಕರಕಲಾದ ಕಾರು ಬಿಎಂಡಬ್ಲ್ಯೂ ಕಂಪೆನಿಯ ಕಾರೆಂದು ಹೇಳಲಾಗುತ್ತಿದ್ದು, ಕಾರು ಉಡುಪಿ ಕಡೆಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಮಂಗಳೂರು ಕಡೆ ತೆರಳುತ್ತಿತ್ತು ಎನ್ನಲಾಗಿದೆ.

ಎನ್ ಐಟಿಕೆ ಬಳಿ ಏಕಾಏಕಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾಗಿದೆ ಎಂದು ತಿಳಿದು ಬಂದಿದೆ.  ಅವಘಡದಲ್ಲಿ ಯಾವುದೇ ಪ್ರಾಣಹಾನಿಯುಂಟಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಮಂಗಳೂರು ಉತ್ತರ ಸಂಚಾರ ಪೊಲೀಸರು, ಸುರತ್ಕಲ್ ಠಾಣೆಯ ಪೊಲಿಸರು ಸ್ಥಳಕ್ಕೆ ದೌಡಾಯಿಸಿದ್ದು, ಅಗ್ನಿ ಶಾಮಕ ದಳಕ್ಕೆ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News