×
Ad

ಸುರತ್ಕಲ್, ನಂತೂರು, ಬಿ.ಸಿ.ರೋಡ್ ಹೆದ್ದಾರಿ ವ್ಯಾಪ್ತಿ ಎನ್‌ಎಚ್‌ಎಐಗೆ ಹಸ್ತಾಂತರ : ಸಂಸದ ಕ್ಯಾ.ಬ್ರಿಜೇಶ್ ಚೌಟ

Update: 2025-11-22 00:09 IST

ಬ್ರಿಜೇಶ್ ಚೌಟ

ಮಂಗಳೂರು, ನ.21: ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್-ನಂತೂರು-ಬಿ.ಸಿ. ರೋಡ್ ಬಂದರು ಸಂಪರ್ಕ ರಸ್ತೆಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಅನುಮೋದನೆ ನೀಡಿದೆ ಎಂದು ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಹೆದ್ದಾರಿ ಪ್ರಾಧಿಕಾರದ ಈ ಮಹತ್ವದ ನಿರ್ಧಾರದಿಂದಾಗಿ ಮಂಗಳೂರಿನ ಅತ್ಯಂತ ನಿರ್ಣಾಯಕ ರಸ್ತೆ ಕಾರಿಡಾರ್‌ಗಳಲ್ಲಿ ಒಂದಾದ ಸುರತ್ಕಲ್-ನಂತೂರು-ಬಿ.ಸಿ.ರೋಡ್ ಹೆದ್ದಾರಿಯ ಸಮರ್ಪಕ ನಿರ್ವಹಣೆ ಮತ್ತು ಸುಧಾರಣೆಗೆ ಕಾಯಕಲ್ಪದೊರೆತಿದೆ. ಎನ್‌ಎಂಪಿಟಿ ವ್ಯಾಪ್ತಿಯ ಈ ಹೆದ್ದಾರಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ತನ್ನ ಅವಿರತ ಶ್ರಮ ಯಶಸ್ವಿಯಾಗಿದೆ ಎಂದು ಅವರು ಹೇಳಿದ್ದಾರೆ.

ಮಂಗಳೂರಿನ ಈ ಬಂದರು ಸಂಪರ್ಕ ಹೆದ್ದಾರಿಯು ತೀರಾ ಹದಗೆಟ್ಟಿದ್ದು, ಸರಕು ವಾಹನ ಹಾಗೂ ದೈನಂದಿನ ವಾಹನಗಳ ಓಡಾಟಕ್ಕೆ ಸಾಕಷ್ಟು ತೊಂದರೆ ಎದುರಾಗುತ್ತಿತ್ತು. ಆ ಹಿನ್ನೆಲೆಯಲ್ಲಿ ತಾನು ಕಳೆದೊಂದು ವರ್ಷದಿಂದ ಸುರತ್ಕಲ್-ಮಂಗಳೂರು- ಬಿ.ಸಿ.ರೋಡ್ ವರೆಗಿನ ರಾಷ್ಟ್ರೀಯ ಹೆದ್ದಾರಿಯ ನಿರ್ವಹಣೆಯನ್ನು ಎನ್‌ಎಚ್‌ಎಐ ವ್ಯಾಪ್ತಿಗೆ ಹಸ್ತಾಂತರಿಸುವುದಕ್ಕೆ ಹೆಚ್ಚಿನ ಮುತುವರ್ಜಿ ವಹಿಸಿದ್ದೆ.

ಈ ಬಗ್ಗೆ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿ ಎನ್‌ಎಚ್‌ಎಐಗೆ ಹಸ್ತಾಂತರಿಸುವಂತೆ ಮನವಿ ಮಾಡಿದ್ದೆ. ಅದರಂತೆ ಹೆದ್ದಾರಿ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿರುವ ಸಚಿವಾಲಯವು, ಆದಷ್ಟು ಬೇಗ ಸುರತ್ಕಲ್-ಬಿ.ಸಿ.ರೋಡ್ ಹೆದ್ದಾರಿ ಸುಧಾರಣೆ ಹಾಗೂ ರಸ್ತೆ ಸುರಕ್ಷತೆ ಸಂಬಂಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವಿಸೃತ್ತ ಯೋಜನಾ ವರದಿ (ಡಿಪಿಆರ್) ತಯಾರಿಸುವಂತೆ ಸೂಚಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News