×
Ad

ಸುರತ್ಕಲ್: ಖಾಸಗಿ ಬಸ್ ಢಿಕ್ಕಿ; ದ್ವಿಚಕ್ರ ಸವಾರನಿಗೆ ಗಾಯ

Update: 2024-07-24 11:45 IST

ಸುರತ್ಕಲ್, ಜು.24: ಖಾಸಗಿ ಬಸ್ ಢಿಕ್ಕಿಹೊಡೆದು ದ್ವಿಚಕ್ರ ಸವಾರ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹೊನ್ನಕಟ್ಟೆ ಎಂಬಲ್ಲಿ ಬುಧವಾರ ಬೆಳಗ್ಗೆ ವರದಿಯಾಗಿದೆ.

ಗಾಯಗೊಂಡವರನ್ನು ಸುರತ್ಕಲ್ ಕೃಷ್ಣಾಪುರ ನಿವಾಸಿ ಹನೀಫ್ ಎಂದು ಗುರುತಿಸಲಾಗಿದೆ.

ಹನೀಫ್ ಅವರು ಬೈಕಂಪಾಡಿ ಸರಕಾರಿ ಶಾಲೆಯ ಬಳಿ ಅಂಗಡಿ ಹೊಂದಿದ್ದು, ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.

ಅಪಘಾತದಲ್ಲಿ ಗಾಯಗೊಂಡಿದ್ದ ಹನೀಫ್ ಅವರನ್ನು ಸಾರ್ವಜನಿಕರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News