×
Ad

ಸುರತ್ಕಲ್: ಚೂರಿ ಇರಿತ ಪ್ರಕರಣ; ಮತ್ತೋರ್ವ ಆರೋಪಿಯ ಬಂಧನ

Update: 2023-09-05 13:27 IST

ಆರೋಪಿ ಪುನೀತ್

ಸುರತ್ಕಲ್: ಇಲ್ಲಿನ ಕಳವಾರು ಗೆಳೆಯರ ಬಳಗ ಬಸ್ ನಿಲ್ದಾಣದ ಬಳಿ ಅಬ್ದುಲ್ ಸಫ್ವಾನ್ ಎಂಬವರಿಗೆ ಚೂರಿ ಇರಿದ ಪ್ರಕರಣ ಸಂಬಂಧ ಮತ್ತೊರ್ವ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಕೈಕಂಬ ಕಿನ್ನಿಕಂಬಳ ಕಂದಾವರ ಪದವು ಕೋರ್ದಬ್ಬು ದೈವಸ್ಥಾನ ಬಳಿಯ ನಿವಾಸಿ ಪುನೀತ್(29 ) ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

ಪ್ರಕರಣಕ್ಕೆ‌ ಸಂಬಂಧಿಸಿದಂತೆ ಈಗಾಗಲೇ ಸಂಘಪರಿವಾರದ ಕಾರ್ಯಕರ್ತರಾಗಿರುವ ಪ್ರಮುಖ ಅರೋಪಿ ಪ್ರಶಾಂತ್‌ ಯಾನೆ ಪಚ್ಚು, ಕಳವಾರು ಆಶ್ರಯ ಕಾಲನಿ ನಿವಾಸಿ ಧನರಾಜ್ ಮತ್ತು ಕಳವಾರು ಚರ್ಚ್‌ ಗುಡ್ಡೆ ಸೈಟ್‌ ನಿವಾಸಿ ಯಜ್ಞೇಶ್‌ ಎಂಬವರನ್ನು ಪೊಲೀಸರು ಬಂಧಿಸಿದ್ದರು.

ಇದೀಗ ಮತ್ತೋರ್ವ ಆರೋಪಿ ಪುನೀತ್ ಎಂಬಾತನ್ನು ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಪ್ರಕರಣದಲ್ಲಿ ಇನ್ನೂ ಹಲವರಿದ್ದು, ಎಲ್ಲರ ಬಂಧನಕ್ಕೆ ಪೊಲೀಸ್ ಇಲಾಖೆ ಶೋಧ ಕಾರ್ಯಾಚಣೆ‌ ನಡೆಸುತ್ತಿದೆ ಎಂದು ತಿಳಿದು ಬಂದಿದೆ. ಆರೋಪಿಗಳ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 307( ಕೊಲೆಯತ್ನ ) ಅಡಿ ಪ್ರಕರಣ ದಾಖಲಾಗಿತ್ತು.

ಆಗಸ್ಟ್‌ 31 ರಂದು ಕಳವಾರಿನಲ್ಲಿ ಗಲಾಟೆ ನಡೆದು ಕಳವಾರು ನಿವಾಸಿ ಗಂಟೆ ರಿಯಾಝ್ ಎಂಬಾತನ ಮೇಲೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಮಾತನಾಡಲಿದೆ ಎಂದು ಕರೆಸಿ ಆರೋಪಿಗಳು ಅಬ್ದುಲ್ ಸಫ್ವಾನ್ ಗೆ ಡ್ರಾಗರ್ ಹಾಗೂ ಚೂರಿಯಲ್ಲಿ ಇರಿದು ಗಾಯಗೊಳಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News