×
Ad

ಸೂರಿಕುಮೇರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಹತ್ತಿ ನಿಂತ ಸರಕಾರಿ ಬಸ್

Update: 2026-01-26 09:04 IST

ಮಾಣಿ: ಇಲ್ಲಿನ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿ ನಿಂತ ಘಟನೆ ಸೋಮವಾರ ಬೆಳಗ್ಗಿನ ಜಾವ ನಡೆದಿದೆ.

ಘಟನೆಯಿಂದ ಬಸ್‌ಗೆ ಭಾಗಶಃ ಹಾನಿ ಉಂಟಾಗಿದ್ದು, ಅತೀವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News