×
Ad

ಮಂಗಳೂರು ಜೈಲಿನಲ್ಲಿ ದಿಢೀರ್ ತಪಾಸಣೆ; 2 ಮೊಬೈಲ್ , ಸಿಮ್ ಕಾರ್ಡ್ ಪತ್ತೆ

Update: 2025-12-30 09:19 IST

ಮಂಗಳೂರು, ಡಿ. 30: ನಗರ ಕಾರಾಗೃಹದ ಅಧೀಕ್ಷಕರ ನೇತೃತ್ವದಲ್ಲಿ ಕಾರಾಗೃಹದ ಅಧಿಕಾರಿ ಹಾಗೂ ಸಿಬ್ಬಂದಿ ಸೋಮವಾರ ತಡರಾತ್ರಿ ನಡೆಸಿದ ದಿಢೀರ್ ತಪಾಸಣೆ ಸಂದರ್ಭ 2 ಮೊಬೈಲ್‌ಗಳು, 1 ಸಿಮ್ ಕಾರ್ಡ್ ಮತ್ತು 1 ಕೇಬಲ್ ರಹಿತ ಮೊಬೈಲ್ ಚಾರ್ಜ ರ್ ಜಪ್ತಿ ಮಾಡಿ ವಶಕ್ಕೆ ತೆಗೆದುಕೊಳ್ಳಲಾಗಿದೆ.

ಇವು ಕಾರಾಗೃಹದಲ್ಲಿ ನಿಷೇಧಿತ ವಸ್ತುಗಳಾಗಿರುವುದರಿಂದ ಮಂಗಳೂರು ಬರ್ಕೆ ಪೊಲೀಸ್ ಠಾಣೆಗೆ ನೀಡಿ ಪ್ರಕರಣ ದಾಖಲಿಸಲಾಗಿರುತ್ತದೆ. ಇದೇ ದಿನ ಇಲಾಖೆಯ ಮುಖ್ಯಸ್ಥರಾದ ಮಾನ್ಯ ಅಲೋಕ್ ಕುಮಾರ್ ಐ.ಪಿ.ಎಸ್. ಮಹಾನಿರ್ದೇಶಕರು ಕರ್ನಾಟಕ ಕಾರಾಗೃಹ ಮತ್ತು ಸುಧಾರಣಾ ಸೇವೆ ಬೆಂಗಳೂರು ಇವರಿಗೆ ದೂರವಾಣಿ ಮುಖಾಂತರ ವಿಷಯವನ್ನು ತಿಳಿಸಲಾಗಿದೆ ಎಂದುಜಿಲ್ಲಾ ಕಾರಾಗೃಹ ಅಧೀಕ್ಷಕ ಶರಣ ಬಸಪ್ಪ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News