×
Ad

ಸುವರ್ಣ ಸುದ್ದಿ ವಾಹಿನಿಯ ವರದಿಗಾರನ ಮೇಲೆ ಹಲ್ಲೆ ಆರೋಪ ; ತಿಮರೋಡಿ, ಸಮೀರ್ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು

Update: 2025-08-07 10:04 IST

ಬೆಳ್ತಂಗಡಿ: ಉಜಿರೆಯಲ್ಲಿ ಸುವರ್ಣ ಸುದ್ದಿ ವಾಹಿನಿಯ ವರದಿಗಾರನ ಮೇಲೆ ನಡೆದ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸಹಿತ ಹಲವರ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸುವರ್ಣ ಸುದ್ದಿ ವಾಹಿನಿಯ ವರದಿಗಾರ ಹರೀಶ್ ಅವರು ನೀಡಿರುವ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ.

ಉಜಿರೆಯ ಖಾಸಗಿ ಆಸ್ಪತ್ರೆಗೆ ವರದಿ ಮಾಡಲೆಂದು ತೆರಳಿದ ವೇಳೆ ಚಾನೆಲ್ ನ ಲೋಗೋ ನೋಡಿ ತಡೆದ ತಂಡ ತನ್ನ ಮೇಲೆ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ಅದರಂತೆ ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಸಮೀರ್ ಯ್ಯಟೂಬರ್, ಜಯಂತ್ ಟಿ, ಹಾಗೂ ಇತರರ ವಿರುದ್ದ ಬಿಎನ್.ಎಸ್ 115(2),189(2),19 ( 2),351(2),352,190 ಸೆಕ್ಷನ್‌ ಅಡಿಯಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News