ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ.30ಕ್ಕೆ ಮುಂದೂಡಿಕೆ
Update: 2025-09-27 17:21 IST
ಮಹೇಶ್ ಶೆಟ್ಟಿ ತಿಮರೋಡಿ
ಮಂಗಳೂರು: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ದಾಖಲಾಗಿರುವ ಅಕ್ರಮ ಶಸ್ತ್ರಾಸ್ತ್ರ ಹೊಂದಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಸಲ್ಲಿಸಲಾದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಸೆ.30ಕ್ಕೆ ಮುಂದೂಡಿದೆ.
ತಿಮರೋಡಿ ಅವರು ತಮ್ಮ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅಕ್ರಮ ಶಸ್ತ್ರಾಸ್ತ್ರ ಹೊಂದಿರುವ ಆರೋಪ ಪ್ರಕರಣದ ಬಗ್ಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ತಿಮರೋಡಿ ಅವರ ನಿರೀಕ್ಷಣಾ ಜಾಮೀನು ಅರ್ಜಿಗೆ ಸಂಬಂಧಿಸಿ ಲಿಖಿತ ಆಕ್ಷೇಪಣೆಯನ್ನು ಸಲ್ಲಿಸಲು ಸರಕಾರಿ ಅಭಿಯೋಜಕರು ಕಾಲಾವಕಾಶ ಕೋರಿರುವ ಹಿನ್ನೆಲೆಯಲ್ಲಿ ಜಿಲ್ಲಾ ಸೆಶನ್ಸ್ ನ್ಯಾಯಾಲಯವು ಅವರಿಗೆ ಸೆ.30ರ ತನಕ ಕಾಲಾವಕಾಶ ನೀಡಿತು.