ಬಂಟ್ವಾಳ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಕಡೆಗೋಳಿ ಸಮೀಪ ಎಲ್‌ಪಿಜಿ ಸಾಗಿಸುತ್ತಿದ್ದ ಲಾರಿಯೊಂದು ಡಿವೈಡರ್‌ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಶನಿವಾರ ಮಧ್ಯರಾತ್ರಿ ನಡೆದಿದೆ.

ಲಾರಿಯೊಳಗೆ ಸಿಲುಕಿಕೊಂಡಿದ್ದ ಚಾಲಕ ಪಪ್ಪು ಚೌಹಾನ್ ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಅವರು ಅಪಾಯದಿಂದ ಪಾರಾಗಿದ್ದಾರೆ.

ಘಟನೆಯಿಂದ ಕೆಲಕಾಲ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಬಂಟ್ವಾಳ ಟ್ರಾಫಿಕ್ ಪೊಲೀಸರು ಲಾರಿಯನ್ನು ಸ್ಥಳದಿಂದ ತೆರವುಗೊಳಿಸಿ, ಸಂಚಾರ ಸುಗಮಗೊಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor