ಉಚ್ಚಿಲ : ಉಚಿತ ಆರೋಗ್ಯ, ಕಣ್ಣಿನ ತಪಾಸಣಾ ಶಿಬಿರ
ಉಳ್ಳಾಲ: ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆ, ಜಸ್ಟಿಸ್ ಕೆ. ಎಸ್. ಹೆಗ್ಡೆ ಆಸ್ಪತ್ರೆ, ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕೋಟೆಕಾರ್, ಉಚ್ಚಿಲ ಬೋವಿ ವಿದ್ಯಾ ಸಂಸ್ಥೆಗಳು ಉಚ್ಚಿಲ ಇವುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ ಉಚ್ಚಿಲ ಬೋವಿ ವಿದ್ಯಾ ಸಂಸ್ಥೆಗಳ ವಜ್ರಮಹೋತ್ಸವ ಸ್ಮಾರಕ ಕಟ್ಟಡದಲ್ಲಿ ನಡೆಯಿತು.
ಸೋಮೇಶ್ವರ ಪುರಸಭೆ ಉಪಾಧ್ಯಕ್ಷ ರವಿಶಂಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ರೋಟರಿ ಡೌನ್ ಟೌನ್ ಕ್ಲಬ್ ಮಂಗಳೂರು ಅಧ್ಯಕ್ಷ ಉಮೇಶ್ ಗಟ್ಟಿ ಶಿಬಿರದ ಪ್ರಾಮುಖ್ಯತೆ ಬಗ್ಗೆ ಮಾಹಿತಿ ನೀಡಿದರು. ಡಾ. ವಿಜಯಲಕ್ಷ್ಮೀ ಮಕ್ಕಳ ಆರೋಗ್ಯ ಕಾಪಾಡುವ ಬಗ್ಗೆ ಮಾಹಿತಿ ನೀಡಿದರು. ಕೌನ್ಸಿಲರ್ ಸಲಾಮ್ ಯು. ಆರೋಗ್ಯ ಶಿಬಿರದ ಅಗತ್ಯತೆ ಬಗ್ಗೆ ವಿವರಿಸಿದರು.
ಡಾ. ಜಯಶ್ರೀ ಉಚ್ಚಿಲ, ಕಣ್ಣಿನ ತಜ್ಞ ಡಾ. ತನ್ವೀ, ಡಾ. ಸೀಮಾ, ಡಾ. ವಿದ್ಯಾಲಕ್ಷ್ಮೀ, ಡಾ. ಪ್ರಾಂಜಲಿ, ರೋಟರಿ ಡೌನ್ ಟೌನ್ ಕ್ಲಬ್ ಮಂಗಳೂರು ಕಾರ್ಯದರ್ಶಿ ಪವಿತ್ರ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಬೋವಿ ಶಾಲಾ ಸಂಚಾಲಕ ಕರುಣಾಕರ ಉಚ್ಚಿಲ ಸ್ವಾಗತಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಸವಿತಾ ಪ್ರಾಸ್ತಾವಿಕವಾಗಿ ಮಾತನಾಡಿದರು. ದೈಹಿಕ ಶಿಕ್ಷಕ ಮೋಹನ್ ದಾಸ್ ರೈ ಕಾರ್ಯಕ್ರಮ ನಿರೂಪಿಸಿದರು.