×
Ad

ಉಳಾಯಿಬೆಟ್ಟು: ಬಾಲಕಿಯ ಅತ್ಯಾಚಾರ ಕೊಲೆ ಪ್ರಕರಣ; ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Update: 2024-11-08 09:34 IST

ಜಯಸಿಂಗ್, ಮುಕೇಶ್ ಸಿಂಗ್, ಮನೀಶ್ ತಿರ್ಕಿ

ಮಂಗಳೂರು:  ಉಳಾಯಿಬೆಟ್ಟು ಪರಾರಿಯ ರಾಜ್ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಕೊಲೆ ಪ್ರಕರಣದ 3 ಮಂದಿ ಆರೋಪಿಗಳಿಗೆ ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ.

ಆರೋಪಿಗಳನ್ನು ಜಯಸಿಂಗ್, ಮುಕೇಶ್ ಸಿಂಗ್, ಮನೀಶ್ ತಿರ್ಕಿ ಎಂದು ಗುರುತಿಸಲಾಗಿದೆ. ಪ್ರಕರಣದ ತನಿಖೆಯನ್ನು ಪೊಲೀಸ್ ನಿರೀಕ್ಷಕ ಜಾನ್ಸನ್ ಡಿಸೋಜಾ ರವರು ಕೈಗೊಂಡು ಆರೋಪಿಗಳ ವಿರುದ್ಧ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದಾರೆ.

ಮೃತ ಬಾಲಕಿಯ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡುವಂತೆ ಹಾಗೂ ಜೀವಾವಧಿ ಶಿಕ್ಷೆ ನೀಡಿ ನ್ಯಾಯಾಧೀಶ ಮಾನು ಅವರು ಆದೇಶಿಸಿದ್ದಾರೆ.

ಇದನ್ನೂ ಓದಿ: ಉಳಾಯಿಬೆಟ್ಟು: ಬಾಲಕಿಯ ಕೊಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News