ಉಳ್ಳಾಲ : ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
Update: 2026-07-14 12:08 IST
ಉಳ್ಳಾಲ : ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಮೇಲಂಗಡಿ ನಿವಾಸಿ ಇಮ್ರಾನ್ ಯಾನೆ ಸುರ್ಮೋ ಇಮ್ರಾನ್ ಬಂಧಿತ ಆರೋಪಿ. ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಈತನ ಬಂಧನಕ್ಕೆ ನ್ಯಾಯಾಲಯ ವಾರಂಟ್ ಜಾರಿ ಮಾಡಿತ್ತು.
ಈತ ಮಂಗಳೂರು ನಗರ ಮತ್ತು ಉಡುಪಿ ಜಿಲ್ಲೆಯ ಒಟ್ಟು 23 ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈತನ ವಿರುದ್ಧ ಮಂಗಳೂರು ನಗರದ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.