×
Ad

ಉಳ್ಳಾಲ: ಎರಡು ದ್ವಿಚಕ್ರ ವಾಹನಗಳು ಢಿಕ್ಕಿ; ಓರ್ವ ಮೃತ್ಯು

Update: 2024-05-16 13:02 IST

ಉಳ್ಳಾಲ : ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ಧಾವಿಸುತ್ತಿದ್ದ ಸ್ಕೂಟರ್ ಗೆ ಕಲ್ಲಾಪು ಜಂಕ್ಷನ್ ನಲ್ಲಿ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ಮತ್ತೊಂದು ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿದ್ದ ಸಹ ಸವಾರ ಸಾವನ್ನಪ್ಪಿದ ಘಟನೆ ಇಂದು ಮುಂಜಾನೆ ನಡೆದಿದೆ.

ಮೃತ ಯುವಕನನ್ನು ಉಳ್ಳಾಲ ಕೋಟೆಪುರದ ಕೋಡಿ ನಿವಾಸಿ ಅಹಮ್ಮದ್ ನಿಷಾದ್ (22) ಎಂದು ಗುರುತಿಸಲಾಗಿದೆ. ಇಂದು ಮುಂಜಾನೆ ನಾಲ್ಕು ಗಂಟೆಯ ವೇಳೆ ಸಯ್ಯದ್ ಹಫೀಝ್ ಎಂಬವರೊಂದಿಗೆ ಸ್ಕೂಟರ್‌  ನಲ್ಲಿ ಸಹ‌ ಸವಾರನಾಗಿ ಮಂಗಳೂರಿನಿಂದ ತೊಕ್ಕೊಟ್ಟಿಗೆ ಬರುತ್ತಿದ್ದ ವೇಳೆ ಕಲ್ಲಾಪು ಜಂಕ್ಷನ್ ನಲ್ಲಿ ತೊಕ್ಕೊಟ್ಟಿನಿಂದ‌ ಬಂದು ಗ್ಲೋಬಲ್ ಮಾರ್ಕೆಟ್ ಗೆ ಕ್ರಾಸ್ ಆಗುತ್ತಿದ್ದ ಸ್ಕೂಟರ್ ಢಿಕ್ಕಿ ಹೊಡೆದಿದೆ.

ಢಿಕ್ಕಿಯ ರಭಸಕ್ಕೆ ಎರಡೂ ಸ್ಕೂಟರ್  ಸವಾರರು ರಸ್ತೆಗೆ ಬಿದ್ದಿದ್ದು. ಗಂಭೀರ ಗಾಯಗೊಂಡ ನಿಷಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.‌ ಸ್ಕೂಟರ್ ಸವಾರ ಹಫೀಝ್ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಮೊತ್ತೋರ್ವ ಸ್ಕೂಟರ್ ಸವಾರ ಕುತ್ತಾರು ಪದವು ನಿವಾಸಿ ಅಬೂಬಕ್ಕರ್ ಸಿದ್ದೀಕ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News