ಉಳ್ಳಾಲ | ಕಾರು ಢಿಕ್ಕಿ : ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು
Update: 2025-05-09 11:09 IST
ಉಳ್ಳಾಲ : ರಸ್ತೆ ದಾಟುತ್ತಿದ್ದ ಮಹಿಳೆಯೊರ್ವರಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ತೊಕ್ಕೊಟ್ಟು ಸಮೀಪದ ಪಂಡಿತ್ ಹೌಸಲ್ಲಿ ಗುರುವಾರ ರಾತ್ರಿ ನಡೆದಿದೆ.
ಮೃತರನ್ನು ಪಂಡಿತ್ ಹೌಸ್ ನಿವಾಸಿ ಪೂರ್ಣಿಮ(59) ಎಂದು ಗುರುತಿಸಲಾಗಿದೆ.
ಪೂರ್ಣಿಮ ಅವರು ನಿನ್ನೆ ಸಂಜೆ ತನ್ನ ಪತಿಯ ಅಣ್ಣ ಜಯರಾಜ್ ಅವರ ಮನೆಗೆ ತೆರಳಿದ್ದರು. ರಾತ್ರಿ ಪಂಡಿತ್ ಹೌಸ್ ತಂಗುದಾಣದಲ್ಲಿ ಬಸ್ ನಿಂದ ಇಳಿದು ರಸ್ತೆ ದಾಟುತ್ತಿದ್ದ ವೇಳೆ ಕೇರಳ ಮೂಲದ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಚಲಾಯಿಸುತ್ತಿದ್ದ ಕಾರು ಢಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೃತರು ಪತಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.