×
Ad

ಉಪ್ಪಿನಂಗಡಿ: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 15ರ ಬಾಲಕ ಮೃತ್ಯು

Update: 2023-08-22 11:06 IST

ಉಪ್ಪಿನಂಗಡಿ, ಆ.22: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಉಪ್ಪಿನಂಗಡಿಯ 15 ವರ್ಷದ ಬಾಲಕನೋರ್ವ

ಬೆಂಗಳೂರಿನ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ಮೃತಪಟ್ಟಿದ್ದಾನೆ.

ಪೆದಮಲೆಯ ಸಮದ್ ಹಾಜಿ ಹಾಗೂ ರೇಷ್ಮಾ ದಂಪತಿಯ ಪುತ್ರ ಅಹ್ಮದ್ ಸಅದ್(15) ಮೃತಪಟ್ಟ ಬಾಲಕ.

ಇಲ್ಲಿನ ಇಂಡಿಯನ್ ಸ್ಕೂಲ್ ವಿದ್ಯಾರ್ಥಿನ 10ನೇ ತರಗತಿ ವಿದ್ಯಾರ್ಥಿಯಾಗಿದ್ದ ಸಅದ್, ಪಠ್ಯ- ಪಠ್ಯೇತರ ಚಟುವಟಿಕೆಗಳಲ್ಲಿ ಮುಂದಿದ್ದು, ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ.

ಅನಾರೋಗ್ಯ ಕಾರಣ ಈತನನ್ನು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ.

ಮೃತನ ಸ್ಮರಣಾರ್ಥ ಆ.22ರಂದು ಇಂಡಿಯನ್ ಸ್ಕೂಲ್ ಗೆ ರಜೆ ಸಾರಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News