×
Ad

ಉಪ್ಪಿನಂಗಡಿ | ದಿಢೀರ್ ಅನಾರೋಗ್ಯಕ್ಕೀಡಾಗಿ ಕಾಲೇಜು ವಿದ್ಯಾರ್ಥಿ ಮೃತ್ಯು

Update: 2024-08-03 13:41 IST

 ಮುಹಮ್ಮದ್ ಸಿರಾಜುದ್ದೀನ್

ಉಪ್ಪಿನಂಗಡಿ : ಧಿಡೀರ್ ಅನಾರೋಗ್ಯಕ್ಕೀಡಾದ ಕಾಲೇಜು ವಿದ್ಯಾರ್ಥಿಯೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ.

ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಮುಹಮ್ಮದ್ ಸಿರಾಜುದ್ದೀನ್ (17) ಮೃತ ವಿದ್ಯಾರ್ಥಿ. ಕೊಯಿಲದ ಗಂಡಿಬಾಗಿಲು ನಿವಾಸಿಯಾಗಿರುವ ಸಿರಾಜುದ್ದೀನ್ ಕಾಲೇಜಿಗೆಂದು ಬೆಳಿಗ್ಗೆ ತನ್ನ ಗೆಳೆಯರೊಂದಿಗೆ ಹೊರಟು ಬಂದಿದ್ದು, ಕಾಲೇಜಿನ ದಾರಿ ಮಧ್ಯೆ ಬಿ.ಪಿ. ಲೋ ಸಮಸ್ಯೆಯಿಂದ ತಲೆ ತಿರುಗಿ ಬಿದ್ದಿದ್ದ ಎನ್ನಲಾಗಿದೆ. ಕೂಡಲೇ ಈತನ ಜೊತೆಗಿದ್ದ ಸ್ನೇಹಿತರು ಸಿರಾಜುದ್ದೀನ್‌ನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಈತನ ಮೃತದೇಹವನ್ನು ಕಾಲೇಜಿಗೆ ತಂದು ಅಂತಿಮ ದರ್ಶನಕ್ಕಿಡಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News