×
Ad

ಉಪ್ಪಿನಂಗಡಿ | ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾ ಪಲ್ಟಿ

Update: 2023-09-11 16:14 IST

ಉಪ್ಪಿನಂಗಡಿ: ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಅಟೋ ರಿಕ್ಷಾವೊಂದು ಮಗುಚಿ ಬಿದ್ದು ಒಂಬತ್ತು ವಿದ್ಯಾರ್ಥಿಗಳು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಬೆಳ್ತಂಗಡಿ ತಾಲೂಕಿನ ಮೂರುಗೋಳಿ ಬಳಿ  ನಡೆದಿದೆ.

ಕಲ್ಲೇರಿ ಆಸುಪಾಸಿನಿಂದ ಮೂಡಡ್ಕದ ಅಲ್ ಮದೀನತುಲ್ ಮುನವ್ವರ ಆಂಗ್ಲ ಮಾಧ್ಯಮ ಶಾಲೆಗೆ ಮಕ್ಕಳನ್ನು ಕರೆದುಕೊಂಡು ಬರುತ್ತಿದ್ದ ಅಟೋ ರಿಕ್ಷಾಕ್ಕೆ ಮೂರುಗೋಳಿ ಬಳಿ ದ್ವಿಚಕ್ರ ವಾಹನವೊಂದು ಅಡ್ಡ ಬಂದಿದ್ದು, ಈ ಸಂದರ್ಭ ಚಾಲಕನ ನಿಯಂತ್ರಣ ಕಳೆದುಕೊಂಡ ಅಟೋ ರಿಕ್ಷಾ ಮಗುಚಿ ಬಿದ್ದಿದೆ.

ಘಟನೆಯಿಂದ ರಿಕ್ಷಾದಲ್ಲಿದ್ದ ಶಾಹಿನ್, ಮುಹಮ್ಮದ್ ಶಹೀರ್, ರಿಫಾ ಫಾತಿಮಾ, ಸಿಹಾಲ್, ಅಮೀನ್, ನಾಫೀರ್, ಮಿಷೂರ್ ಸೇರಿದಂತೆ ಒಂಬತ್ತು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಉಪ್ಪಿನಂಗಡಿ ಸಮುದಾಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದುಕೊಂಡು ಮನೆಗೆ ಮರಳಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News