×
Ad

ಬೆಳ್ತಂಗಡಿ | ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಪದ ಬಳಕೆ : ಪ್ರಕರಣ ದಾಖಲು

Update: 2025-08-09 00:14 IST

ಬೆಳ್ತಂಗಡಿ, ಆ.8: ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರಿಗೆ ಕಿರಿಕಿರಿಯಾಗುವಂತೆ ಅಶ್ಲೀಲವಾಗಿ ಮಾತನಾಡಿರುವ ಬಗ್ಗೆ ರಾಕೇಶ್ ಶೆಟ್ಟಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬೆಳ್ತಂಗಡಿ ನಿವಾಸಿ ಶ್ರೀನಿವಾಸ್ ಎಂಬವರು ಈ ಬಗ್ಗೆ ದೂರು ನೀಡಿದ್ದು, ರಾಕೇಶ್ ಶೆಟ್ಟಿ ಎಂಬಾತನು ಯೂಟ್ಯೂಬ್‌ನಲ್ಲಿ ಸಾರ್ವಜನಿಕರಿಗೆ ಕಿರಿಕಿರಿಯಾಗುವಂತೆ ಅಶ್ಲೀಲ ಪದಗಳನ್ನು ಬಳಸಿ ಮಾತನಾಡಿರುವ ವೀಡಿಯೊ ಕಂಡುಬಂದಿದೆ ಎಂದು ದೂರು ನೀಡಿದ್ದಾರೆ.

ಈ ದೂರಿನ ಹಿನ್ನಲೆಯಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಕಲಂ 296ಬಿ.ಎನ್. ಎಸ್. ಅಂತೆ ಪ್ರಕರಣ ದಾಖಲಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News