×
Ad

ದ.ಕ.ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ʼವಾರ್ತಾಭಾರತಿʼಯ ಪುಷ್ಪರಾಜ್ ಆಯ್ಕೆ

Update: 2025-11-09 20:51 IST

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವಾರ್ತಾಭಾರತಿಯ ಮಂಗಳೂರು ಬ್ಯೂರೋ ಚೀಫ್ ಪುಷ್ಪರಾಜ್ ಬಿ.ಎನ್. ಆಯ್ಕೆಯಾಗಿದ್ದಾರೆ.

ದ.ಕ.ಜಿಲ್ಲಾ ವಾರ್ತಾ ಇಲಾಖೆಯ ಸಭಾಂಗಣದಲ್ಲಿ ರವಿವಾರ ನಡೆದ ಚುನಾವಣೆಯಲ್ಲಿ 2025-28ನೆ ಸಾಲಿನ ಅಧ್ಯಕ್ಷರಾಗಿ ಆಯ್ಕೆಯಾದರು.

ಪುಷ್ಪರಾಜ್ 187 ಮತಗಳನ್ನು ಗಳಿಸಿದರೆ ಅವರ ಪ್ರತಿಸ್ಪರ್ಧಿ ವಿಜಯವಾಣಿ ಪತ್ರಿಕೆಯ ವರದಿಗಾರ ಶ್ರವಣ್ ಕುಮಾರ್ ನಾಳ 144 ಮತಗಳನ್ನು ಪಡೆದರು.

ಸುಮಾರು ಮೂರು ದಶಕಗಳಿಂದ ಸಾರ್ವಜನಿಕ ಜೀವನದಲ್ಲಿ ತೊಡಗಿಸಿಕೊಂಡಿರುವ ಪುಷ್ಪರಾಜ್ 1990-91ರಿಂದ ಸಾಕ್ಷರತಾ ಚಟುವಟಿಕೆ, ಶೈಕ್ಷಣಿಕ ಜಾಗೃತಿಯೊಂದಿಗೆ ಮಾಧ್ಯಮ ರಂಗದ ಮೂಲಕ ಪುತ್ತೂರು ತಾಲೂಕು, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸಕ್ರಿಯರಾಗಿದ್ದರು.

ಬಳಿಕ ದ.ಕ. ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಕಾರ್ಯಕಾರಿ ಸಮಿತಿ ಸದಸ್ಯ, ಕೋಶಾಧಿಕಾರಿ ಸಹಿತ ವಿವಿಧ ಜವಾಬ್ದಾರಿಯನ್ನು ನಿಭಾಯಿಸಿದ್ದರು.

ರಾಜ್ಯ ಕಾರ್ಯಕಾರಣಿ ಸಮಿತಿಯ ಸದಸ್ಯರಾಗಿ ಪತ್ರಕರ್ತರ ಸಂಘದ ನಿಕಟಪೂರ್ವ ಅಧ್ಯಕ್ಷ ಶ್ರೀನಿವಾಸ ನಾಯಕ್ ಆಯ್ಕೆಯಾಗಿದ್ದಾರೆ. ಶ್ರೀನಿವಾಸ ನಾಯಕ್ 204 ಮತ ಪಡೆದರೆ, ಅವರ ಪ್ರತಿಸ್ಪರ್ಧಿ ವಿಜಯವಾಣಿ ಪತ್ರಿಕೆಯ ವರದಿಗಾರ ಅನ್ಸಾರ್ ಇನೋಳಿ 124 ಮತಗಳನ್ನು ಗಳಿಸಿದರು.

ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಪೂಜಾರಿ ಮತ್ತು ಕೋಶಾಧಿಕಾರಿಯಾಗಿ ವಿಜಯ ಕೋಟ್ಯಾನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮುಹಮ್ಮದ್ ಆರೀಫ್, ವಿಲ್ಫ್ರೆಡ್ ಡಿ ಸೋಜ ಮತ್ತು ರಾಜೇಶ್ ಶೆಟ್ಟಿ, ಕಾರ್ಯದರ್ಶಿಗಳಾಗಿ ಸತೀಶ್ ಇರಾ, ಸಿದ್ದೀಕ್ ನೀರಾಜೆ, ಸುರೇಶ್ ಪಳ್ಳಿ ಗೆಲುವು ಸಾಧಿಸಿದ್ದಾರೆ.

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಶೋಕ್ ಶೆಟ್ಟಿ ಬಿ.ಎನ್, ಸಂದೇಶ್ ಜಾರ, ಸಂದೀಪ್ ಕುಮಾರ್ ಎಂ, ಲಕ್ಷ್ಮೀನಾರಾಯಣ ರಾವ್, ಹರೀಶ್ ಮೋಟುಕಾನ, ದಿವಾಕರ ಪದ್ಮುಂಜ, ಕಿರಣ್ ಯು. ಸಿರ್ಸಿಕರ್, ಅಭಿಷೇಕ್ ಎಚ್.ಎಸ್., ಜಯಶ್ರೀ, ಭುವನೇಶ್ವರ ಜಿ, ಸಂದೀಪ್ ವಾಗ್ಲೆ, ಹರೀಶ್ ಕೆ.ಆದೂರ್, ಗಿರೀಶ್ ಅಡ್ಪಂಗಾಯ, ಸಂದೀಪ್ ಸಾಲ್ಯಾನ್, ಆರಿಫ್ ಕಲ್ಕಟ್ಟ ಆಯ್ಕೆಯಾಗಿದ್ದಾರೆ.




 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News